ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣ: ಉಪ ತಹಶೀಲ್ದಾರ್ ಅಮಾನತು

Prasthutha|

ಮೈಸೂರು: ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯ ಕಂಪ್ಯೂಟರ್ ಆಪರೇಟರ್ ಪರಮೇಶ್ ಆತ್ಮಹತ್ಯೆ ಪ್ರಕರಣ ಸಂಬಂಧ ಕಿರುಕುಳ ಆರೋಪ ಎದುರಿಸುತ್ತಿರುವ ಉಪ ತಹಶೀಲ್ದಾರ್ ಶಿವಕುಮಾರ್ ಅವರನ್ನು ಅಮಾನತು ಮಾಡಿ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಅವರು ಆದೇಶಿಸಿದ್ದಾರೆ.

- Advertisement -


ಆತ್ಮಹತ್ಯೆಗೂ ಮುನ್ನ ಪರಮೇಶ್, ತನ್ನ ಸಾವಿಗೆ ಉಪತಹಸೀಲ್ದಾರ್ ಶಿವಕುಮಾರ್ ನೀಡುತ್ತಿರುವ ಕಿರುಕುಳವೇ ಕಾರಣ ಎಂದು ಡೆತ್ ನೋಟ್ ಬರೆದು ನಿನ್ನೆ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕಿದ್ದರು. ಬಳಿಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಪರಮೇಶ್ ರನ್ನು ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತದಾರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.



Join Whatsapp