ಕಾಂಕ್ರೀಟ್ ಮಿಕ್ಸರ್ ಲಾರಿ ಕಾರಿನ ಮೇಲೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ತಾಯಿ, ಮಗಳು

Prasthutha|

- Advertisement -

ಬೆಂಗಳೂರು: ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಕಾರಿನ ಮೇಲೆ ಬಿದ್ದು ತಾಯಿ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಆನೆಕಲ್ ತಾಲೂಕಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು 47 ವರ್ಷದ ಗಾಯತ್ರಿ ಕುಮಾರ್ ಮತ್ತು 16 ವರ್ಷದ ಸಮತಾ ಕುಮಾರ್ (16) ಎಂದು ಗುರುತಿಸಲಾಗಿದೆ.


ತಾಯಿ ತನ್ನ ಮಗಳನ್ನು ಕಾರಿನಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ ಬನ್ನೇರುಘಟ್ಟ ಸಮೀಪದ ತಿರುವಿನಲ್ಲಿ ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Join Whatsapp