ನವದೆಹಲಿ: ‘ವಯನಾಡು ಭೂಕುಸಿತದ ಪ್ರಮಾಣವನ್ನು ನೇರವಾಗಿ ನೋಡಿದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ವಿಶ್ವಾಸವಿದೆ’ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದರು.
ಪ್ರಧಾನಿ ಅವರ ವಯನಾಡ್ ಭೇಟಿ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ‘ದುರಂತದ ಬಗ್ಗೆ ವೈಯಕ್ತಿಕವಾಗಿ ಅವಲೋಕನ ಮಾಡಲು ವಯನಾಡ್ಗೆ ಭೇಟಿ ನೀಡುತ್ತಿರುವುದಕ್ಕೆ ಧನ್ಯವಾದಗಳು. ಇದೊಂದು ಉತ್ತಮ ನಿರ್ಧಾರ’ ಎಂದಿದ್ದಾರೆ.
‘ವಿನಾಶದ ಪ್ರಮಾಣವನ್ನು ನೇರವಾಗಿ ನೋಡಿದ ನಂತರ ನೀವು ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತೀರಿ ಎಂಬ ವಿಶ್ವಾಸ ನನಗಿದೆ’ ಎಂದು ಹೇಳಿದರು.
ಇಂದು ಬೆಳಿಗ್ಗೆ 11 ಗಂಟೆಗೆ ಕಣ್ಣೂರಿಗೆ ಬಂದಿಳಿಯುವ ಮೋದಿ ಅವರು ಅಲ್ಲಿಂದ ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ