ಸುನೀಲ್ ಜಾಖರ್ ರನ್ನು 2 ವರ್ಷ ಅಮಾನತುಪಡಿಸಿ: ಕಾಂಗ್ರೆಸ್ ಶಿಸ್ತು ಸಮಿತಿ ಶಿಫಾರಸು

Prasthutha|

ನವದೆಹಲಿ: ಪಂಜಾಬ್ ಕಾಂಗ್ರೆಸ್’ನ ಹಿರಿಯ ಮುಖಂಡ ಸುನೀಲ್ ಜಾಖರ್ ಅವರನ್ನು ಎರಡು ವರ್ಷಗಳ ಅವಧಿಗೆ ಪಕ್ಷದಿಂದ ಅಮಾನತುಗೊಳಿಸುವಂತೆ ಎ.ಕೆ. ಆ್ಯಂಟನಿ ನೇತೃತ್ವದ ಕಾಂಗ್ರೆಸ್ ಶಿಸ್ತು ಕ್ರಮ ಸಮಿತಿ ಶಿಫಾರಸು ಮಾಡಿದೆ.

- Advertisement -

ಮಾತ್ರವಲ್ಲ ಕೇರಳದ ಹಿರಿಯ ಕಾಂಗ್ರೆಸ್ ನಾಯಕ ಕೆ.ವಿ. ಥಾಮಸ್ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ತೆಗೆದು ಹಾಕುವಂತೆ ಶಿಫಾರಸು ಮಾಡಿದೆ. ಇದರ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಪಂಜಾಬ್’ನ ಎಐಸಿಸಿ ಉಸ್ತುವಾರಿ ಹರೀಶ್ ಚೌಧರಿ ಅವರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಜಾಖರ್ ಅವರ ಕೆಲವು ಹೇಳಿಕೆಯ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಸದ್ಯ ಸೋನಿಯಾ ಗಾಂಧಿ ಅವರು ಈ ಪತ್ರವನ್ನು ಶಿಸ್ತು ಕ್ರಮ ಸಮಿತಿಗೆ ರವಾನಿಸಿದ್ದಾರೆ.

- Advertisement -

ಪಕ್ಷದ ನೈತಿಕತೆಯ ಸಂಪೂರ್ಣ ಉಲ್ಲಂಘನೆಯಾಗಿದೆ ಎಂಬ ಹೇಳಿಕೆ ನೀಡಿದ್ದ ಜಾಖರ್ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ಶೋಕಾಸ್ ನೋಟಿಸ್ ನಲ್ಲಿ ಉಲ್ಲೇಖಿಸಿದೆ.

ಈ ಮಧ್ಯೆ ಕಣ್ಣೂರಿನಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಸಮಾವೇಶದ ಪಕ್ಕದಲ್ಲಿ ಸಿಪಿಎಂ ಆಯೋಜಿಸಿದ್ದ ಸೆಮಿನಾರ್ ನಲ್ಲಿ ಭಾಗವಹಿಸಿದ್ದಕ್ಕಾಗಿ ಕೇರಳ ಘಟಕ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಬಳಿಕ ಶಿಸ್ತು ಕ್ರಮ ಸಮಿತಿ ಥಾಮಸ್ ಅವರಿಗೆ ನೋಟಿಸ್ ನೀಡಿತ್ತು.



Join Whatsapp