ಡಿಸಿ ಮುಲ್ಲೈ ಮುಗಿಲನ್​ಗೆ ಶಹಬ್ಬಾಸ್ ಎಂದ ಮಂಗಳೂರಿನ ಜನ: ಬಡ್ತಿ ಸಿಗಬಹುದು ಎಂದ ಗುಂಡೂರಾವ್

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ನೆರೆ, ಸಾಕಷ್ಟು ಹಾನಿ ಉಂಟಾಗಿದೆ. ಈ ಹಿನ್ನೆಲೆ ಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

- Advertisement -

ಅದ್ಯಪಾಡಿಯ ಮೋಗೆರ್ ಕುದ್ರುವಿಗೆ ಶುಕ್ರವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು. ಇದೇ ವೇಳೆ, ಉಸ್ತುವಾರಿ ಸಚಿವರ ಮುಂದೆ ಮೊಗೇರ್ ಕುದ್ರುವಿನ ಜನ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ಮಳೆಗಾಲದ ಸಂದರ್ಭ ಇದೇ ರೀತಿ ಸಮಸ್ಯೆ ಆಗುತ್ತದೆ. ನಮಗೆ ಇದಕ್ಕಿಂತ ಸ್ವಲ್ಪ ವಿಷ ಆದರೂ ಕೊಡಿ ಎಂದು ಸಚಿವರ ಬಳಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಉಸ್ತುವಾರಿ ಸಚಿವರ ಮುಂದೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​ಗೆ ಮೊಗೇರ್ ಕುದ್ರು ಜನರು ಶಹಬ್ಬಾಸ್​​​ಗಿರಿ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಜಿಲ್ಲಾಧಿಕಾರಿಯವರನ್ನು ಇಲ್ಲಿಂದ ವರ್ಗಾವಣೆ ಮಾಡಬೇಡಿ. ಅವರು ಬಹಳ ಒಳ್ಳೆಯ ಅಧಿಕಾರಿ. ಜಿಲ್ಲಾಧಿಕಾರಿಗೆ ನಮ್ಮ ನೋವು ಕೇಳಿಸಿಕೊಳ್ಳುವ ತಾಳ್ಮೆ ಇದೆ ಎಂದು ಜನ ಮೆಚ್ಚುಗೆಯ ಮಾತುಗಳನ್ನಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗುಂಡೂರಾವ್, ಜಿಲ್ಲಾಧಿಕಾರಿಯವರು ಮುಂದೆ ಬಡ್ತಿ ಪಡೆಯುತ್ತಾರೆ. ಅವರು ಬಹಳ ಒಳ್ಳೆಯ ಅಧಿಕಾರಿ, ಉತ್ತಮವಾಗಿ ಕೆಲಸ ಮಾಡುತ್ತಾರೆ ಎಂದರು.



Join Whatsapp