ವಿರೋಧ ಪಕ್ಷದ ನಾಯಕರು ಬೇಕಾಗಿದ್ದಾರೆ: ಕಾಲೆಳೆದ ಕಾಂಗ್ರೆಸ್‌

Prasthutha|

- Advertisement -

ಬೆಂಗಳೂರು: ವಿರೋಧ ಪಕ್ಷದ ನಾಯಕರು ಬೇಕಾಗಿದ್ದಾರೆ ಎಂದು ಕಾಂಗ್ರೆಸ್‌ ತನ್ನ ಟ್ವೀಟರ್ ಖಾತೆಯಲ್ಲಿ ಬಿಜೆಪಿ ವಿರುದ್ಧ ಕಾಲೆಳೆದಿದೆ.

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮುಗಿದು 50 ದಿನಗಳೇ ಕಳೆದಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ವಹಿಸಿಕೊಂಡು ಒಂದು ತಿಂಗಳು ಕಳೆದಿದೆ. ಇಷ್ಟಾದರೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡುವಲ್ಲಿ ಎಡವಿದೆ. ಈ ವಿಚಾರದ ಬಗ್ಗೆ ಕಾಂಗ್ರೆಸ್‌ ಟ್ವೀಟ್‌ ಮೂಲಕ ಟೀಕಿಸಿದೆ

- Advertisement -

ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ, ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದ ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು ಅಂತಹ ವಿಪಕ್ಷನಾಯಕ ಬೇಕಾಗಿದ್ದಾರೆ ಎಂದಿ ರಾಜ್ಯ ಕಾಂಗ್ರೆಸ್‌, ಬಿಜೆಪಿಯನ್ನು ಟೀಕಿಸಿದ್ದಾರೆ‌.



Join Whatsapp