ಮಮತಾ ಬ್ಯಾನರ್ಜಿ ಫ್ಯಾಶಿಸ್ಟ್ ಶಕ್ತಿಗಳಿಗೆ ನೆರವಾಗುತ್ತಿದ್ದಾರೆ: ಕಾಂಗ್ರೆಸ್ ಗಂಭೀರ ಆರೋಪ

Prasthutha: December 3, 2021

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ, ಯುಪಿಎ ವಿರುದ್ಧ ಹೇಳಿಕೆ ನೀಡಿದ್ದ ಬೆನ್ನಲ್ಲೇ ತಿರುಗೇಟು ನೀಡಿರುವ ಕಾಂಗ್ರೆಸ್, ಮಮತಾ ಬ್ಯಾನರ್ಜಿ ಅವರು ರಾಜಕೀಯ ಫ್ಯಾಶಿಸ್ಟ್ ಶಕ್ತಿಗಳಿಗೆ ನೆರವಾಗುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಮಮತಾ ಬ್ಯಾನರ್ಜಿ ಜಂಟಿಯಾಗಿ ಶಾಸಕರನ್ನು ಖರೀದಿಸುವ ಮೂಲಕ ಪಕ್ಷವನ್ನು ಒಡೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಆರೋಪಿಸಿದ್ದಾರೆ.

ನೀವು ಹೋರಾಟದ ಸೋಗು ಹಾಕಿಕೊಂಡು ಆರೆಸ್ಸೆಸ್ ಮತ್ತು ಬಿಜೆಪಿ ಪ್ರೇರಿತ ಫ್ಯಾಶಿಸ್ಟ್ ಶಕ್ತಿಗಳನ್ನು ಬಲಪಡಿಸಲು ಸಂಪೂರ್ಣ ರಾಜಕೀಯ ಅವಕಾಶಗಳೊಂದಿಗೆ ಮುಂದುವರಿಯಲು ಸಾಧ್ಯವಿಲ್ಲ. ಆದರೆ ಭಾರತೀಯತೆ, ಪ್ರಜಾಪ್ರಜಾಪ್ರಭುತ್ವ, ಸಹೋದರತ್ವ, ನಂಬಿಕೆ ಮತ್ತು ಸಹಾನುಭೂತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಎಂದಿಗೂ ರಾಜಿ ಮಾಡಿಕೊಂಡಿಲ್ಲ ಎಂದು ಸುರ್ಜೇವಾಲಾ ಸುದ್ದಿಗಾರರಿಗೆ ತಿಳಿಸಿದರು.

ಮಮತಾ ಅವರು ವಿವಿಧ ಸಂದರ್ಭದಲ್ಲಿ ವಿವಿಧ ಶೈಲಿಯಲ್ಲಿ ವ್ಯವಹರಿಸುತ್ತಾರೆ ಎಂದು ಆರೋಪಿಸಿದ ಅವರು, ಮಮತಾ ಬ್ಯಾನರ್ಜಿ ಹಲವಾರು ಬಾರಿ ಪಕ್ಷಗಳನ್ನು ಬದಲಾಯಿಸುವ ಮೂಲಕ ಎನ್.ಡಿ.ಎ ಮತ್ತು ಯುಪಿಎ ಎರಡಕ್ಕೂ ಬೆಂಬಲಿಸಿದ್ದಾರೆ ಎಂದು ನೆನೆಸಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!