►ಇಡಿ, ಸಿಬಿಐ ದಾಳಿಯಿಂದ ತಪ್ಪಿಸಿಕೊಳ್ಳಲು ಮಮತಾ ಅವರು ಮೋದಿ ವಿರುದ್ಧ ಹೇಳಿಕೆ ನೀಡುತ್ತಿಲ್ಲ ಎಂದ ರಂಜನ್ ಚೌಧರಿ
ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್’ನ ಪ್ರತಿಷ್ಠೆಗೆ ಧಕ್ಕೆ ತರಲು ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅಧೀರ್ ರಂಜನ್ ಚೌಧರಿ ಅವರು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನ ಪ್ರತಿಷ್ಠೆಗೆ ಧಕ್ಕೆ ತರಲು ಒಪ್ಪಂದ ಮಾಡಿಕೊಂಡಿದ್ದಾರೆ. ಮಮತಾ ಅವರು ಪ್ರಧಾನಿಯವರ ನಿರ್ದೇಶನದ ಮೇರೆಗೆ ಮಾತನಾಡುತ್ತಿದ್ದಾರೆ. ಇಬ್ಬರೂ ಸೇರಿಕೊಂಡು ರಾಹುಲ್ ಗಾಂಧಿ ಇಮೇಜ್ ಹಾಳು ಮಾಡಲು ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ದೂರಿದರು.
ಜಾರಿ ನಿರ್ದೇಶನಾಲಯ(ಇಡಿ) ಮತ್ತು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದಾಳಿಯಿಂದ ತಪ್ಪಿಸಿಕೊಳ್ಳಲು ಮಮತಾ ಅವರು ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡುತ್ತಿಲ್ಲ. ಅವರೊಂದಿಗೆ ಉತ್ತಮ ಬಾಂಧವ್ಯ ಕಾಯ್ದುಕೊಂಡಿದ್ದಾರೆ. ಪ್ರಧಾನಿ ಪರವಾಗಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧವಾಗಿ ಮಮತಾ ದೀದಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.