ಚಿನ್ನ ಕಳ್ಳ ಸಾಗಣೆ ಆರೋಪ: ಕೇರಳ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Prasthutha|

ತಿರುವನಂತಪುರ: ಚಿನ್ನ ಕಳ್ಳ ಸಾಗಣೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿದೆ.

- Advertisement -

ಚಿನ್ನ ಕಳ್ಳ ಸಾಗಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ರಾಜ್ಯದೆಲ್ಲೆಡೆ ಕಾಂಗ್ರೆಸ್ ಮತ್ತು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿಗಳಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಪಿಣರಾಯಿ ಮತ್ತು ಎಡರಂಗ ಮೈತ್ರಿಕೂಟದ ವಿರುದ್ಧ ಘೋಷಣೆ ಕೂಗಿದ್ದಾರೆ.

ತಿರುವನಂತಪುರ, ಕ್ಯಾಲಿಕಟ್, ಮಲಪ್ಪುರಂ, ಕಣ್ಣೂರು ಸೇರಿದಂತೆ ಹಲವೆಡೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಂಘರ್ಷಕ್ಕಿಳಿದಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮತ್ತು ಜಲಫಿರಂಗಿ ಪ್ರಯೋಗಿಸಿದ್ದಾರೆ.ಘಟನೆಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.



Join Whatsapp