ಕಾಂಗ್ರೆಸ್ ನ ಜಾಹೀರಾತು ಚೊಂಬಿನಲ್ಲಿ ಹಿಂದೂಗಳ ರಕ್ತ ತುಂಬಿದೆ: ಆರ್. ಅಶೋಕ್

Prasthutha|

ತುಮಕೂರು: ಕಾಂಗ್ರೆಸ್ ನೀಡಿರುವ ಜಾಹೀರಾತಿನ ಚೊಂಬಿನಲ್ಲಿ ಹಿಂದೂಗಳ ರಕ್ತ ತುಂಬಿಕೊಂಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದರು.

- Advertisement -


ನಗರದಲ್ಲಿ ಸೋಮವಾರ ನೇಹಾ ಕೊಲೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ತಾಲೀಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಜಾಹೀರಾತಿನ ಚೊಂಬಿನ ಪೂರ್ತಿ ರಕ್ತ ತುಂಬಿದೆ. ಚೊಂಬಿನಿಂದ ಹಿಂದೂಗಳ ರಕ್ತ ತುಂಬಿ ಚೆಲ್ಲುತ್ತಿರುವುದು ಅದರ ಪ್ರತೀಕವಾಗಿದೆ. ಇದಕ್ಕೆ ಪ್ರತಿಯಾಗಿ ‘ಕಾಂಗ್ರೆಸ್ ಬಂದ್ರೆ ಡೇಂಜರ್’ ಎಂದು ಬಿಜೆಪಿಯಿಂದಲೂ ಜಾಹೀರಾತು ನೀಡಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಕೊಲೆ, ಸುಲಿಗೆ ಹೆಚ್ಚಾಗಿವೆ. ಗೂಂಡಾ ರಾಜ್ಯ ಮಾಡಲು ಹೊರಟಿದೆ. ಮುಸ್ಲಿಂ ಭಯೋತ್ಪಾದಕರು ಏನು ಮಾಡಿದರೂ ರಕ್ಷಣೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಜೈ ಶ್ರೀರಾಮ್ ಘೋಷಣೆ ಕೂಗುವುದು ಸಹ ಅಪರಾಧವಾಗಿದೆ ಎಂದು ಟೀಕಿಸಿದರು.

Join Whatsapp