Home ಟಾಪ್ ಸುದ್ದಿಗಳು ಪ್ರಣಾಳಿಕೆಯಲ್ಲಿ CAA ಉಲ್ಲೇಖಿಸಲು ಕಾಂಗ್ರೆಸ್’ಗೆ ಭಯ: ಸಿಎಂ ಪಿಣರಾಯಿ

ಪ್ರಣಾಳಿಕೆಯಲ್ಲಿ CAA ಉಲ್ಲೇಖಿಸಲು ಕಾಂಗ್ರೆಸ್’ಗೆ ಭಯ: ಸಿಎಂ ಪಿಣರಾಯಿ

ಕೊಲ್ಲಂ: 2024ರ ಲೋಕಸಭಾ ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಬಗ್ಗೆ ಯಾವುದೇ ಉಲ್ಲೇಖ ಮಾಡದೇ ಇರುವ ಕಾಂಗ್ರೆಸ್ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ.


ವಿವಾದಾತ್ಮಕ ವಿಷಯಗಳ ಬಗ್ಗೆ ಪ್ರಸ್ತಾಪಿಸಲು ಕಾಂಗ್ರೆಸ್ ಗೆ ಇರುವ ಭಯವನ್ನು ಇದು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಧಿಕಾರಕ್ಕೆ ಬಂದರೆ ಜಿಎಸ್ಟಿ ಸೇರಿ, ಸಂವಿಧಾನವನ್ನು ಉಲ್ಲಂಘಿಸಿ ಜಾರಿಗೆ ತರಲಾದ ಹಲವು ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಆದರೆ ಸಿಎಎ ಬಗ್ಗೆ ಒಂದು ಶಬ್ದವನ್ನೂ ಉಲ್ಲೇಖಿಸಿಲ್ಲ’ ಎಂದು ಅವರು ದೂರಿದ್ದಾರೆ.

Join Whatsapp
Exit mobile version