ಬೆಂಗಳೂರು: ಬರ ಪರಿಹಾರದ ವಿಚಾರವಾಗಿ ಸುಪ್ರೀಂ ಕೋರ್ಟಿನಲ್ಲಿ ಕರ್ನಾಟಕಕ್ಕೆ ಮೊದಲ ಹಂತದ ಜಯ ಸಿಕ್ಕಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಪ್ರತಿಕ್ರಿಯಿಸಿದೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಒಂದು ವಾರದೊಳಗೆ ಕರ್ನಾಟಕಕ್ಕೆ ಬರ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ಕೇಂದ್ರ ಸರ್ಕಾರ ಒಪ್ಪಿದೆ. ಚುನಾವಣಾ ಭಾಷಣದಲ್ಲಿ ಸುಳ್ಳು ಹೇಳುವ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಬಾಲ ಮುದುರಿ ಒಪ್ಪಿಕೊಂಡಿದೆ. ಕನ್ನಡಿಗರ ಹಿತ ಕಾಯುವ ದೃಷ್ಟಿಯಿಂದ ಕೋರ್ಟ್ ಮೆಟ್ಟಿಲೇರುವ ಕರ್ನಾಟಕ ಸರ್ಕಾರದ ದಿಟ್ಟ ನಿರ್ಧಾರದಿಂದ ಕನ್ನಡದ ರೈತರಲ್ಲಿ ಆಶಾಭಾವನೆ ಮೂಡುವಂತಾಗಿದೆ ಎಂದಿದೆ.
ಈ ಹೋರಾಟದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜೊತೆ ಕೈಜೋಡಿಸಿ ಬೆಂಬಲವಾಗಿ ನಿಂತ ರಾಜ್ಯದ ರೈತರು ಹಾಗೂ ಪ್ರಜ್ಞಾವಂತ ಜನತೆಗೆ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಬರ ಪರಿಹಾರದ ವಿಚಾರವಾಗಿ ಸುಪ್ರೀಂ ಕೋರ್ಟಿನಲ್ಲಿ ಕರ್ನಾಟಕಕ್ಕೆ ಮೊದಲ ಹಂತದ ಜಯ ಸಿಕ್ಕಿದೆ.
— Karnataka Congress (@INCKarnataka) April 22, 2024
ಒಂದು ವಾರದೊಳಗೆ ಕರ್ನಾಟಕಕ್ಕೆ ಬರ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ಕೇಂದ್ರ ಸರ್ಕಾರ ಒಪ್ಪಿದೆ.
ಚುನಾವಣಾ ಭಾಷಣದಲ್ಲಿ ಸುಳ್ಳು ಹೇಳುವ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಬಾಲ ಮುದುರಿ ಒಪ್ಪಿಕೊಂಡಿದೆ.
ಕನ್ನಡಿಗರ ಹಿತ… pic.twitter.com/ErEeXg9axC