ಕಾಪು ಪುರಸಭೆಯ ಅಭಿವೃದ್ಧಿಗೆ ತೊಡಕಾಗಿರುವ ಕಾಂಗ್ರೆಸ್, ಬಿಜೆಪಿಯನ್ನು ತಿರಸ್ಕರಿಸಿ: ರಿಯಾಝ್ ಫರಂಗಿಪೇಟೆ

Prasthutha|

ಕಾಪು: ಕಾಪು ಪುರಸಭಾ ಚುನಾವಣೆ – 2021 ರಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಕಣಕ್ಕಿಳಿದಿರುವ 9 ಅಭ್ಯರ್ಥಿಗಳ ಪರವಾಗಿ ಪುರಸಭೆ ವ್ಯಾಪ್ತಿಯಲ್ಲಿ ಪಕ್ಷದ ಮುಖಂಡರು ಬಿರುಸಿನ ಮತಯಾಚನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಕಾಪು ಪುರಸಭೆ ಅಸ್ತಿತ್ವಕ್ಕೆ ಬಂದು 5 ವರ್ಷ ಕಳೆದವು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಆಳ್ವಿಕೆಯನ್ನು ನಡೆಸಿದೆ. ಈ ಸಂದರ್ಭದಲ್ಲಿ ಜನತೆಗೆ ನೀಡಿರುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದ್ದು, ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ ಹಾಗೂ ಅಲ್ಪಸಂಖ್ಯಾತರ ವಿರೋಧಿಯಂತೆ ವರ್ತಿಸುತ್ತಿದೆ. ಬಿಜೆಪಿಯು ಅಭಿವೃದ್ಧಿ ಕೆಲಸಗಳ ವಿಚಾರದಲ್ಲೂ ಧರ್ಮಾಧಾರಿತ ತಾರತಮ್ಯ ಮಾಡಿರುವುದಲ್ಲದೆ ತಮ್ಮ ಎಂದಿನ ಹಿಂಸಾತ್ಮಕ ಕೋಮುವಾದಿ ನೀತಿಯನ್ನು ಬಲಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ. ನಗರೋತ್ಥಾನ ನಿಧಿಯನ್ನು ಸಮರ್ಪಕವಾಗಿ ಬಳಸಲು ವಿಫಲವಾಗಿದೆ ಎಂದು ಆರೋಪಿಸಿದರು.

ಆದ್ದರಿಂದ ಕಾಪು ಪುರಸಭೆ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳಿಗೆ ಪರ್ಯಾಯವಾಗಿ ಎಸ್ ಡಿಪಿಐ ಪಕ್ಷವನ್ನು ಗೆಲ್ಲಿಸಿ ಜನತೆಯ ಸೇವೆ ಮಾಡಲು ಒಂದು ಅವಕಾಶ ಮಾಡಿ ಕೊಡಬೇಕೆಂದು ಅವರು ಮನವಿ ಮಾಡಿದರು.

- Advertisement -

ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ, ಅಡ್ವೋಕೇಟ್ ಅಬ್ದುಲ್ ಮಜೀದ್ ಖಾನ್, ಉಡುಪಿ ಜಿಲ್ಲಾಧ್ಯಕ್ಷರಾದ ನಝೀರ್ ಚಿಯರ್ಸ್, ಸಾದಿಕ್ ಎಂ.ಪಿ ಮತ್ತು ಇತರರು ಉಪಸ್ಥಿತರಿದ್ದರು.



Join Whatsapp