ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ 4ನೇ ಗ್ಯಾರಂಟಿಯನ್ನು ಸೋಮವಾರ ಪ್ರಕಟಿಸಿದ್ದು, ನಿರುದ್ಯೋಗ ಪದವೀಧರರಿಗೆ ತಿಂಗಳಿಗೆ 3000 ರೂ. ಭತ್ಯೆ ನೀಡುವುದಾಗಿ ತಿಳಿಸಿದೆ.
‘ಯುವ ನಿಧಿ’ ಎಂಬ ಹೆಸರಿನ ಈ ಯೋಜನೆಯಡಿ ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು 1500 ರೂ.ಭತ್ಯೆ ಹಾಗೂ ಪದವೀಧರರಿಗೆ ಪ್ರತಿ ತಿಂಗಳು 3000 ರೂ. ಭತ್ಯೆ ನೀಡಲಾಗುವುದು. ಇದು ಎರಡು ವರ್ಷಗಳವರೆಗೆ ಸಿಗಲಿದೆ ಎಂದು ಕಾಂಗ್ರೆಸ್ ಪ್ರಕಟಿಸಿದೆ.
ಈಗಾಗಲೇ ಕಾಂಗ್ರೆಸ್ ಪಕ್ಷ ಮೂರು ಗ್ಯಾರಂಟಿಗಳನ್ನು ಘೋಷಿಸಿದೆ.