ಚಂಡೀಗಢ: ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪಂಜಾಬ್ ಕಾಂಗ್ರೆಸ್ ಘೋಷಿಸಿದೆ.
ನಾಳೆ (ಭಾನುವಾರ) ಈ ಕುರಿತ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ಕಾಂಗ್ರೆಸ್ ನಾಯಕತ್ವ ತಿಳಿಸಿದೆ.
ಪಂಜಾಬ್ ಪಿಸಿಸಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಆಕ್ಷೇಪದ ಮಧ್ಯೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಾರ್ಯಕರ್ತರು ಮತ್ತು ಖಾಸಗಿ ಏಜೆನ್ಸಿಗಳ ಮೂಲಕ ನಡೆಸಿದ ಸಮೀಕ್ಷೆಯು ಚನ್ನಿಯ ಬಗ್ಗೆ ಒಲವು ತೋರಿದ ಹಿನ್ನೆಲೆಯಲ್ಲಿ ಈ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಭಾನುವಾರ ಲುಧಿಯಾನದಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಅಧಿಕೃತ ಘೋಷಣೆ ಮಾಡಲಿದ್ದಾರೆ.