ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್: ಸಿಂದಗಿಯಿಂದ ಅಶೋಕ ಮನಗೂಳಿ, ಹಾನಗಲ್ ನಿಂದ ಶ್ರೀನಿವಾಸ್ ಮಾನೆ ಕಣಕ್ಕೆ

Prasthutha|

ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

- Advertisement -


ಸಿಂದಗಿ ಕ್ಷೇತ್ರಕ್ಕೆ ಅಶೋಕ ಮನಗೂಳಿ ಹಾಗೂ ಹಾನಗಲ್ ಕ್ಷೇತ್ರಕ್ಕೆ ಶ್ರೀನಿವಾಸ ವಿ ಮಾನೆ ಅವರ ಹೆಸರನ್ನು ಅಂತಿಮಗೊಳಿಸಿ ಎಐಸಿಸಿ ಆದೇಶ ಹೊರಡಿಸಿದೆ.

ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಮತದಾನ ನಡೆಯಲಿದ್ದು, ನವಂಬರ್ 2 ರಂದು ಮತ ಎಣಿಕೆ ನಡೆಯಲಿದೆ.

- Advertisement -

ಹಾನಗಲ್ ಕ್ಷೇತ್ರವನ್ನು ಬಿಜೆಪಿ ಶಾಸಕ ಸಿ.ಎಂ. ಉದಾಸಿ ಪ್ರತಿನಿಧಿಸುತ್ತಿದ್ದರು. ಸಿಂಧಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಪ್ರತಿನಿಧಿಸುತ್ತಿದ್ದರು. ಅವರು ಮೃತಪಟ್ಟ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ.

Join Whatsapp