Home ಟಾಪ್ ಸುದ್ದಿಗಳು ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್: ಸಿಂದಗಿಯಿಂದ ಅಶೋಕ ಮನಗೂಳಿ, ಹಾನಗಲ್ ನಿಂದ ಶ್ರೀನಿವಾಸ್ ಮಾನೆ...

ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್: ಸಿಂದಗಿಯಿಂದ ಅಶೋಕ ಮನಗೂಳಿ, ಹಾನಗಲ್ ನಿಂದ ಶ್ರೀನಿವಾಸ್ ಮಾನೆ ಕಣಕ್ಕೆ

ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.


ಸಿಂದಗಿ ಕ್ಷೇತ್ರಕ್ಕೆ ಅಶೋಕ ಮನಗೂಳಿ ಹಾಗೂ ಹಾನಗಲ್ ಕ್ಷೇತ್ರಕ್ಕೆ ಶ್ರೀನಿವಾಸ ವಿ ಮಾನೆ ಅವರ ಹೆಸರನ್ನು ಅಂತಿಮಗೊಳಿಸಿ ಎಐಸಿಸಿ ಆದೇಶ ಹೊರಡಿಸಿದೆ.

ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಮತದಾನ ನಡೆಯಲಿದ್ದು, ನವಂಬರ್ 2 ರಂದು ಮತ ಎಣಿಕೆ ನಡೆಯಲಿದೆ.

ಹಾನಗಲ್ ಕ್ಷೇತ್ರವನ್ನು ಬಿಜೆಪಿ ಶಾಸಕ ಸಿ.ಎಂ. ಉದಾಸಿ ಪ್ರತಿನಿಧಿಸುತ್ತಿದ್ದರು. ಸಿಂಧಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಪ್ರತಿನಿಧಿಸುತ್ತಿದ್ದರು. ಅವರು ಮೃತಪಟ್ಟ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ.

Join Whatsapp
Exit mobile version