ಕಾಂಗ್ರೆಸ್-ಬಿಜೆಪಿ ಮೈತ್ರಿ ಮಾಡಿಕೊಂಡಿವೆ, ನಾವು ಬೆಂಬಲ ವಾಪಾಸ್ ಪಡೆಯುತ್ತೇವೆ : ಗೆಹ್ಲೋಟ್ ಸರಕಾರಕ್ಕೆ ಬಿಟಿಪಿ ಎಚ್ಚರಿಕೆ

Prasthutha|

ಜೈಪುರ : ಕಾಂಗ್ರೆಸ್ ಮತ್ತು ಬಿಜೆಪಿ ಬದ್ಧ ವೈರಿಗಳಂತೆ ಕಿತ್ತಾಡುತ್ತವೆ. ಆದರೆ, ಅಗತ್ಯ ಬಿದ್ದರೆ ಸ್ಥಳೀಯ ಶಕ್ತಿಗಳನ್ನು ದೂರವಿಡಲು ಇವು ಒಂದಾದ ಸಾಕಷ್ಟು ಉದಾಹರಣೆಗಳು ದೇಶದ ಹಲವು ಭಾಗಗಳಲ್ಲಿವೆ. ಇದೀಗ ಹೊಸದಾಗಿ, ರಾಜಸ್ಥಾನದಲ್ಲಿ ಎರಡು ಕಡೆ ಸ್ಥಳೀಯ ಭಾರತೀಯ ಟ್ರೈಬಲ್ ಪಾರ್ಟಿ(ಬಿಟಿಪಿ) ಮತ್ತು ರಾಷ್ಟ್ರೀಯ ಲೋಕತಾಂತ್ರಿಕ್ ಪಾರ್ಟಿಗಳನ್ನು ಅಧಿಕಾರದಿಂದ ದೂರ ಇಡುವ ಸಲುವಾಗಿ ಕಾಂಗ್ರೆಸ್-ಬಿಜೆಪಿ ಕೈಜೋಡಿಸಿವೆ. ಈ ಹಿನ್ನೆಲೆಯಲ್ಲಿ, ಆಕ್ರೋಶಗೊಂಡಿರುವ ರಾಜಸ್ಥಾನ ಸರಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯುವುದಾಗಿ ಭಾರತೀಯ ಟ್ರೈಬಲ್ ಪಾರ್ಟಿ ಬೆದರಿಕೆಯನ್ನೂ ಒಡ್ಡಿದೆ.

- Advertisement -

ಈ ಹಿಂದೆ ಕಾಂಗ್ರೆಸ್ ನಲ್ಲಿ ಬಂಡಾಯವೆದ್ದಾಗ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರಕಾರಕ್ಕೆ ಭಾರತೀಯ ಟ್ರೈಬಲ್ ಪಾರ್ಟಿ(ಬಿಟಿಪಿ) ಬೆಂಬಲ ಕೊಟ್ಟು ಅವರ ಮರ್ಯಾದೆ ಉಳಿಸಿತ್ತು. ಆದರೆ, ಈಗ ತಮ್ಮ ಪಕ್ಷ ಸ್ಥಳೀಯಾಡಳಿತದಲ್ಲಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಕಾಂಗ್ರೆಸ್-ಬಿಜೆಪಿ ಒಂದಾಗಿರುವುದು ಪಕ್ಷದ ಆಕ್ರೋಶಕ್ಕೆ ಕಾರಣವಾಗಿದೆ.

ದುರ್ಗಾಪುರ ಜಿಲ್ಲಾ ಪಂಚಾಯತ್ ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಟಿಪಿ ಅಭ್ಯರ್ಥಿಯನ್ನು ಬೆಂಬಲಿಸದ ಕಾಂಗ್ರೆಸ್ ಬೆಂಬಲಿಗರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿದ್ದಾರೆ. ದುರ್ಗಾಪುರ ಜಿಲ್ಲಾ ಪಂಚಾಯತ್ ನ 27 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ 13 ಅಭ್ಯರ್ಥಿಗಳು ಗೆದ್ದಿದ್ದರು, ಕಾಂಗ್ರೆಸ್ ಎಂಟು ಮತ್ತು ಬಿಜೆಪಿ ಆರು ಸ್ಥಾನಗಳಲ್ಲಿ ಗೆದ್ದಿತ್ತು. ಬಿಜೆಪಿ-ಕಾಂಗ್ರೆಸ್ ಮೈತ್ರಿಯಿಂದ 14 ಅಭ್ಯರ್ಥಿಗಳು ಬಿಜೆಪಿ ಬೆಂಬಲಿತ ಅಧ್ಯಕ್ಷೀಯ ಅಭ್ಯರ್ಥಿಯನ್ನು ಗೆಲ್ಲಿಸಲು ಸಹಕಾರಿಯಾಗಿದೆ.  

- Advertisement -

ಅದೇ ರೀತಿ ನಗೌರ್ ಜಿಲ್ಲೆಯ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ತನ್ನ ಮಿತ್ರ ಪಕ್ಷ ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿ ಬೆಂಬಲಿತ ಅಭ್ಯರ್ಥಿಯನ್ನು ಆಯ್ಕೆ ಮಾಡದೆ, ಅದು ಸ್ವತಂತ್ರ ಅಭ್ಯರ್ಥಿಯೊಬ್ಬರನ್ನು ಬೆಂಬಲಿಸಿದೆ. ಕಾಂಗ್ರೆಸ್ ಕೂಡ ಸ್ವತಂತ್ರ ಅಭ್ಯರ್ಥಿಯನ್ನೇ ಬೆಂಬಲಿಸಿದೆ.

ಕರ್ನಾಟಕದಲ್ಲಿ ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲೂ ಕಾಂಗ್ರೆಸ್-ಬಿಜೆಪಿ ಮೈತ್ರಿ ಮಾಡಿಕೊಂಡಿದ್ದುದನ್ನು ಇಲ್ಲಿ ಸ್ಮರಿಸಬಹುದಾಗಿದೆ.   

Join Whatsapp