ಕಾಂಗ್ರೆಸ್‍ ಗೆ ಬಿಜೆಪಿಯ ಯಾವ ಶಾಸಕರೂ ಹೋಗಲ್ಲ: ಆರಗ ಜ್ಞಾನೇಂದ್ರ

Prasthutha|

- Advertisement -

ಶಿವಮೊಗ್ಗ: ಕಾಂಗ್ರೆಸ್‍ ಗೆ ಬಿಜೆಪಿಯ ಯಾವ ಶಾಸಕರು ಕೂಡ ಹೋಗುವುದಿಲ್ಲ. ಕಾಂಗ್ರೆಸ್‍ ನವರು ಸುಮ್ಮನೆ ಗುಲ್ ಎಬ್ಬಿಸಿದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಇರುವ ಮಾಹಿತಿ ಪ್ರಕಾರ ಯಾವ ಶಾಸಕರು ಕಾಂಗ್ರೆಸ್‍ಗೆ ಹೋಗುವುದಿಲ್ಲ. ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಈ ವಿಷಯವನ್ನು ಮರೆಮಾಚಲು ಇದನ್ನು ಬೆಳಕಿಗೆ ತಂದಿದ್ದಾರೆ.
ಗುತ್ತಿಗೆ ನೌಕರರಿಗೆ ಈ ಸರ್ಕಾರ ಬಂದ ಮೇಲೆ ವೇತನ ಸಹ ಕೊಟ್ಟಿಲ್ಲ ಎಂದು ಆರೋಪಿಸಿದರು ಎಂದರು.

- Advertisement -

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ಜಲಾಶಯಗಳಲ್ಲಿ ನೀರಿಲ್ಲ, ಆರ್ ಟಿಪಿಎಸ್ ನಲ್ಲಿ ಕಲ್ಲಿದ್ದಲು ಇಲ್ಲ. ವಿದ್ಯುತ್ ಉತ್ಪಾದನೆಗೆ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ ಎಂದರು.

Join Whatsapp