ತೆಲಂಗಾಣ ಚುನಾವಣೆ: ಮತಗಟ್ಟೆಯಲ್ಲಿ ಕಾಂಗ್ರೆಸ್, ಬಿಜೆಪಿ, ಬಿಆರ್’ಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Prasthutha|

ಹೈದರಾಬಾದ್: ತೆಲಂಗಾಣದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಈ ನಡುವೆ ಮತಗಟ್ಟೆಯೊಂದರಲ್ಲಿ ಮೂರು ಪಕ್ಷದ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.

- Advertisement -


ಜನಗಾಂವ್ನ ಮತಗಟ್ಟೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಬಿಆರ್ ಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ನಡೆಯುತ್ತಿದ್ದಂತೆಯೇ ಮತಗಟ್ಟೆಯಲ್ಲಿದ್ದ ಪೊಲೀಸರು ಕೂಡಲೇ ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.



Join Whatsapp