ಸರಪಾಡಿ ಕುಡಿಯುವ ನೀರಿನ ಯೋಜನೆ ಉದ್ಘಾಟನೆ ವಿವಾದ | ಕಾಂಗ್ರೆಸ್-ಬಿಜೆಪಿ ಮುಖಂಡರ ನಡುವೆ ವಾಗ್ವಾದ, ತಳ್ಳಾಟ

Prasthutha|

ಬಂಟ್ವಾಳ : ಇಲ್ಲಿನ ಸರಪಾಡಿಯಲ್ಲಿ ಅನುಷ್ಠಾನಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ಯರ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಈ ವೇಳೆ ನೂಕಾಟ-ತಳ್ಳಾಟವೂ ನಡೆದಿದೆ ಎಂದು ವರದಿಯಾಗಿದೆ.

- Advertisement -

ಯೋಜನೆಯನ್ನು ಭಾನುವಾರ ಬೆಳಗ್ಗೆ ಸಚಿವ ಈಶ್ವರಪ್ಪ ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಸಿದ್ಧತೆ ನಡೆಸುತ್ತಿದ್ದರು. ಇನ್ನೊಂದೆಡೆ ಇಲ್ಲಿಗೆ ಈ ಯೋಜನೆಯನ್ನು ಮಾಜಿ ಸಚಿವ ಬಿ. ರಮಾನಾಥ ರೈ ಅನುಷ್ಠಾನಗೊಳಿಸಿದ್ದಾರೆ. ಇದಕ್ಕಾಗಿ ಬಂಟ್ವಾಳ ತಾ.ಪಂ. ಚಂದ್ರಹಾಸ ಕರ್ಕೇರ ನೇತೃತ್ವದಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು ಶನಿವಾರ ಬೆಳಗ್ಗೆ ಇಲ್ಲಿಗೆ ಆಗಮಿಸಿದ್ದಾರೆ.

ಈ ವೇಳೆ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಯೋಜನೆ ಉದ್ಘಾಟನೆಗೆ ಆಗಮಿಸಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

- Advertisement -

ಇದರಿಂದಾಗಿ ಎರಡೂ ಪಕ್ಷದ ಕಾರ್ಯಕರ್ತರು ಜಮಾಯಿಸಿದರು. ತಕ್ಷಣವೇ ನಗರ ಠಾಣೆ ಪೊಲೀಸರು ಬಂದು ಯೋಜನಾ ಘಟಕದ ಗೇಟ್ ಹಾಕಿ ತಡೆದರು. ಇದೇ ವೇಳೆ ಎರಡೂ ಪಕ್ಷಗಳ ಪ್ರಮುಖರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ತಳ್ಳಾಟ ನಡೆದಿದೆ. ಈ ನಡುವೆ, ರಮಾನಾಥ ರೈ, ಪ್ರಮುಖರಾದ ಬೇಬಿ ಕುಂದರ್, ಚಂದ್ರಪ್ರಕಾಶ್ ಶೆಟ್ಟಿ, ಬಿ. ಪದ್ಮಶೇಖರ್ ಜೈನ್ ಸಹಿತ ಕಾರ್ಯಕರ್ತರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.



Join Whatsapp