Home ಕರಾವಳಿ ಮಂಗಳೂರು: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

ಮಂಗಳೂರು: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

►ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ಜಖಂ

►ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

ಮಂಗಳೂರು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳೂರು ಹೊರವಲಯದ ಮುಡುಶೆಡ್ಡೆಯಲ್ಲಿ ನಡೆದಿದೆ.

ಚುನಾವಣಾ ಪಕ್ಷದ ಬೂತ್ಗೆ ಅಭ್ಯರ್ಥಿ ಮಿಥುನ್ ರೈ ಬಂದಾ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಎರಡು ಪಕ್ಷದ ಕಾರ್ಯಕರ್ತರಿಂದ ಪರ ವಿರೋಧ ಘೋಷಣೆ ಹಿನ್ನೆಲೆ ಮಾರಾಮಾರಿಗೆ ಕಾರಣವಾಗಿದೆ. ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಈ ಕುರಿತು ಮಾತನಾಡಿದ ಪೊಲೀಸ್ ಆಯುಕ್ತ ಕುಲದೀಪ್ ಜೈನ್, ಮತದಾನ ಮುಗಿದ ಬಳಿಕ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದೆ. ಪರಸ್ಪರ ಘೋಷಣೆ ಕೂಗಿದ ವೇಳೆ ಗಲಾಟೆ ಆಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಿಸಿ ಹೆಚ್ಚುವರಿ ಭದ್ರತೆ ಹಾಕಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೂಡುಶೆಡ್ಡೆಯಲ್ಲಿ ಚೆಕ್ ಪೋಸ್ಟ್ ಹಾಕಿ ವಾಹನ ತಪಾಸಣೆ ನಡೆಸುತ್ತೇವೆ. ಬರುವ ಮತ್ತು ಹೊರಗಿನ ವಾಹನಗಳ ಮೇಲೆ ನಿಗಾ ಇಡಲಾಗುವುದು. ಘಟನೆಯಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರಿಗೆ ಗಾಯಗಳಾಗಿವೆ. ನಮ್ಮ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಹೇಳಿದರು.

Join Whatsapp
Exit mobile version