ನಾಲಗೆ ಬಿಗಿ ಹಿಡಿದು ಮಾತನಾಡಿ: ರಾಜಕೀಯ ನಾಯಕರಿಗೆ ಚುನಾವಣಾ ಆಯೋಗ ಸೂಚನೆ

Prasthutha|

- Advertisement -

ಬೆಂಗಳೂರು: ಉಪ ಚುನಾವಣೆ ಪ್ರಚಾರದ ವೇಳೆ ಪ್ರತಿಸ್ಪರ್ಧಿ ಪಕ್ಷಗಳ ನಾಯಕರ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸದಂತೆ ಎಲ್ಲ ರಾಜಕೀಯ ನಾಯಕರಿಗೆ ಸೂಚಿಸಿರುವ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ನೀಡಿದೆ.

ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಎಲ್ಲಾ ಪಕ್ಷದ ನಾಯಕರು ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿ ಭಾಷೆ ಬಳಸುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಆಧರಿಸಿ ಕೇಂದ್ರ ಚುನಾವಣ ಆಯೋಗದ ಮಾರ್ಗಸೂಚಿಗಳನ್ನು ಉಲ್ಲೇಖಿಸಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಅವರು ಎಲ್ಲ ರಾಜಕೀಯ ಪಕ್ಷಗಳಿಗೆ ಅ. 21ರಂದು ಸೂಚನೆ ಹೊರಡಿಸಿದ್ದಾರೆ.

Join Whatsapp