Home ಟಾಪ್ ಸುದ್ದಿಗಳು ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಪ್ರತಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಪ್ರತಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಇಂದು ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ಮಾಡಲು ನಿರ್ಧರಿಸಿದೆ. ಇದಕ್ಕೆ ಪ್ರತಿಯಾಗಿ ವಿಪಕ್ಷ ಬಿಜೆಪಿ ನಾಯಕರು ವಿಧಾನಸೌಧದ ಎದುರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ.

“ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆಗು ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಇಂದು ಫೆಬ್ರವರಿ7 (ಬುಧವಾರ) ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುವುದು” ಎಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್​ ಮಾಡಿದ್ದಾರೆ.

Join Whatsapp
Exit mobile version