ಕಾಂಗ್ರೆಸ್ ಹಣದ ಹೊಳೆ ಹರಿಸಬಹುದು: ದೇವೇಗೌಡ

Prasthutha|

ಬೆಂಗಳೂರು: ಕೆಲಸ ಮಾಡಿ ಎಲ್ಲಾ ಕ್ಷೇತ್ರಗಳನ್ನೂ ಗೆಲ್ಲಿಸಿ, ಹಳೆಯದನ್ನು ಮರೆಯಿರಿ. ಕಾಂಗ್ರೆಸ್ ಬಳಿ ಸಂಪನ್ಮೂಲ ಹೆಚ್ಚಾಗಿದೆ. ಕಾಂಗ್ರೆಸ್ನವರು ಬೇರೆ ರಾಜ್ಯಗಳಿಗೂ ಹಣ ಸಾಗಿಸಿದರು. ಕಾಂಗ್ರೆಸ್ ಈ ಚುನಾವಣೆಯಲ್ಲಿ ಹಣದ ಹೊಳೆ ಹರಿಸಬಹುದು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಸುರಿಯುವ ಕಾಂಗ್ರೆಸ್ ಪಕ್ಷ ಸೋಲಿಸುವುದು ಸುಲಭವಲ್ಲ. ನಾಯಕರು ಎಲ್ಲಾ ಮಾಹಿತಿಯನ್ನು ಬಿಜೆಪಿ ವರಿಷ್ಠರಿಗೆ ನೀಡುತ್ತಿದ್ದಾರೆ ಎಂದು ದೇವೇಗೌಡ ಹೇಳಿದರು.

ಎರಡೂ ಪಕ್ಷದಲ್ಲಿ ಸಮನ್ವಯ ಸಾಧಿಸಬೇಕು. ಹಿಂದೆ ಆದಂತಹ ವಿಚಾರಗಳನ್ನೆಲ್ಲ ಮರೆತು ನಾವೆಲ್ಲರೂ ಒಂದಾಗಬೇಕಿದೆ ಎಂದು ಅವರು ಹೇಳಿದರು.



Join Whatsapp