ನವದೆಹಲಿ: ದೇಶದೆಲ್ಲೆಡೆ ಕೋವಿಡ್ ಮತ್ತು ಓಮಿಕ್ರಾನ್ ಪ್ರಕರಣಗಳು ಹಠಾತ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಯ ಹೊಸ್ತಿಲಿನಲ್ಲಿರುವ ಉತ್ತರ ಪ್ರದೇಶದಲ್ಲಿ ಮ್ಯಾರಥಾನ್ ಸೇರಿದಂತೆ ತನ್ನ ಎಲ್ಲಾ ಸಾರ್ವಜನಿಕ ಜಾಥಾ ಮತ್ತು ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಎಐಸಿಸಿ ಯಲ್ಲಿ ಪಕ್ಷದ ಹಿರಿಯ ನಾಯಕರು ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿ ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರದಂತಹ ಚುನಾವಣೆ ಹೊಸ್ತಿಲಿನಲ್ಲಿರುವ ರಾಜ್ಯಗಳಲ್ಲಿ ಕಾಂಗ್ರೆಸ್ ಸಮಿತಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹಿರಿಯ ನಾಯಕರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.