ಪಶ್ಚಿಮ ಬಂಗಾಳ | ಕಾಂಗ್ರೆಸ್ ಅಭ್ಯರ್ಥಿ ಕೋವಿಡ್ ಸೋಂಕಿಗೆ ಬಲಿ

Prasthutha|

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಂಸರ್‌ಗಂಜ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ರಿಝಾವುಲ್ ಹಕ್ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿತ್ತು.

- Advertisement -

ಮುರ್ಷಿದಾಬಾದ್ ಜಿಲ್ಲೆಯ ಸಂಸರ್‌ಗಂಜ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಝಾವುಲ್ ಹಕ್ ಕೊರೋನಾ ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ನ ಕಾರ್ಯದರ್ಶಿ ರೋಹನ್ ಮಿತ್ರ ಟ್ವೀಟ್ ಮಾಡಿದ್ದಾರೆ. ಬಂಗಾಳದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ರಾಜ್ಯದ ಸರ್ವಪಕ್ಷ ಸಭೆ ಕರೆದಿದೆ. ರಾಜ್ಯದಲ್ಲಿ ನಿನ್ನೆ 5,892 ಜನರಿಗೆ  ಕೋವಿಡ್ ದೃಢಪಟ್ಟಿದೆ ಎನ್ನಲಾಗಿದೆ.

Join Whatsapp