ಮಧ್ಯಪ್ರದೇಶ: ಮಧ್ಯಪ್ರದೇಶದ ಇಂದೋರ್ ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರು ಸೋಮವಾರ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.
ಈ ಬಗ್ಗೆ ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ ಅವರು ತಮ್ಮ ಎಕ್ಸ್ ನಲ್ಲಿ ‘ಪಕ್ಷಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ. ಕಾಂಗ್ರೆಸ್ ನ ಇಂದೋರ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಂಬ್ ಅವರನ್ನು ಬಿಜೆಪಿ ಸ್ವಾಗತಿಸುತ್ತದೆ” ಎಂದು ಹಿಂದಿಯಲ್ಲಿ ವಿಜಯವರ್ಗಿಯ ಎಕ್ಸ್ ಬರೆದುಕೊಂಡಿದ್ದಾರೆ. ಇದೀಗ ಸೂರತ್ ನಂತೆ ಇಲ್ಲಿಯು ಬಿಜೆಪಿ ಅಭ್ಯರ್ಥಿಯೇ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಾಂಗ್ರೆಸ್ ನಾಯಕನ ಈ ನಡೆ ಕಾಂಗ್ರೆಸ್ ಪಕ್ಷ ಮುಜುಗರ ಉಂಟು ಮಾಡಿದೆ.
इंदौर से कांग्रेस के लोकसभा प्रत्याशी श्री अक्षय कांति बम जी का माननीय प्रधानमंत्री श्री @narendramodi जी, राष्ट्रीय अध्यक्ष श्री @JPNadda जी, मुख्यमंत्री @DrMohanYadav51 जी व प्रदेश अध्यक्ष श्री @vdsharmabjp जी के नेतृत्व में भाजपा में स्वागत है। pic.twitter.com/1isbdLXphb
— Kailash Vijayvargiya (@KailashOnline) April 29, 2024