Home ಟಾಪ್ ಸುದ್ದಿಗಳು ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್

ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್

ಹುಬ್ಬಳ್ಳಿ/ಧಾರವಾಡ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಕುಟುಂಬ ಸಮೇತವಾಗಿ ಬಂದು ಮತ ಚಲಾಯಿಸಿದ್ದಾರೆ.


ಕುಸುಗಲ್ ರಸ್ತೆ ಶಬರಿ ನಗರದ ಎಸ್.ಬಿ.ಐ ಆಂಗ್ಲ ಮಾಧ್ಯಮ ಶಾಲೆಯ ಮತಗಟ್ಟೆ ನಂ. 122 ರಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಕುಟುಂಬ ಸಮೇತವಾಗಿ ಬಂದು ವೋಟ್ ಮಾಡಿದರು.


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಎಲ್ಲೆಡೆ ದೊಡ್ಡ ಪ್ರಮಾಣದಲ್ಲಿ ಮತದಾನ ಜರುಗುತ್ತಿದೆ. ನಾನು ಕಾಂಗ್ರೆಸ್ನಿಂದ ಸ್ಪರ್ಧಿಸಿದ ಬಳಿಕ ಜನರಿಂದ ಹಿಂದಿಗಿಂತಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಜನರ ಉತ್ಸಾಹ ಗಮನಿಸಿದರೆ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ” ಎಂದರು.

Join Whatsapp
Exit mobile version