ಕಾಂಗ್ರೆಸ್ ಅಭ್ಯರ್ಥಿ ಮುಶ್ರೀಫ್ ಅರ್ಜಿ ವಜಾಗೊಳಿಸಿ ದಂಡ ಹಾಕಿದ ನ್ಯಾಯಾಲಯ: ಯತ್ನಾಳ್

Prasthutha|

ವಿಜಯಪುರ: ತನ್ನ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ದಾಖಲಿಸಿದ್ದ ಚುನಾವಣಾ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದಲ್ಲದೆ, ಅರ್ಜಿದಾರರಿಗೆ ದಂಡ ವಿಧಿಸಿದ್ದಾಗಿ ವಿಜಯಪುರ ನಗರ ಶಾಸಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

- Advertisement -

2023ರಲ್ಲಿ ನಡೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತನ್ನ ವಿರುದ್ಧ ಕಾಂಗ್ರೆಸ್‌ನಿಂದ ಅಬ್ದುಲ್ ಹಮೀಮ್ ಮುಶ್ರೀಫ್ ಸ್ಪರ್ಧಿಸಿದ್ದರು. ಅವರು ರಾಜಕೀಯ ಪ್ರೇರಿತವಾಗಿ ದುರುದ್ದೇಶದಿಂದ ತಮ್ಮ ವಿರುದ್ಧ ದೂರು ದಾಖಲಿಸಿದ್ದರು. ಅವರು ದಾಖಲಿಸಿದ್ದ ಚುನಾವಣ ಅರ್ಜಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯ ವಜಾಗೊಳಿಸಿದೆ. ಅಲ್ಲದೆ, ಅರ್ಜಿದಾರ ಅಬ್ದುಲ್ ಹಮೀದ್ ಮುಶ್ರೀಫ್ ಅವರಿಗೆ 1 ಲಕ್ಷ ದಂಡ ವಿಧಿಸಿದೆ ಎಂದು ಯತ್ನಾಳ್ ತಿಳಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಪ್ ಸೋಲಿನ ಹತಾಶೆಯಿಂದ 2023 ರ ಜೂನ್ 23 ರಂದು ತಮ್ಮ ವಿರುದ್ಧ ದೂರು ನೀಡಿದ್ದರು ಎಂದಿದ್ದಾರೆ.



Join Whatsapp