ಎ.3ರಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಕೆ: ರಮಾನಾಥ ರೈ

Prasthutha|

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ಎ.3ರಂದು ಬೆಳಗ್ಗೆ 11ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿ ಬಿ.ರಮಾನಾಥ ರೈ ಹೇಳಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ನಾಮಪತ್ರ ಸಲ್ಲಿಸುವ ಮುನ್ನ ಬೆಳಗ್ಗೆ 9:30ಕ್ಕೆ ಕುದ್ರೋಳಿ ದೇವಸ್ಥಾನದಿಂದ ಹೊರಡುವ ಮೆರವಣಿಗೆಯು ಅಳಕೆ, ನ್ಯೂಚಿತ್ರಾ ಟಾಕೀಸ್, ಉಷಾ ಕಿರಣ್ ಹೋಟೆಲ್ (ಎಡ),ಟೆಂಪಲ್ ಸ್ಕ್ವಾರ್, ಜಿಎಚ್ಎಸ್ ರೋಡ್(ಬಲ), ಗಣಪತಿ ಹೈಸ್ಕೂಲ್ ರಸ್ತೆ, ಓಲ್ಡ್ ಐಡಿಯಲ್ ಪಾರ್ಲರ್, ಮಂಗಳೂರು ವಿವಿ ಕಾಲೇಜು ರೋಡ್, ಕ್ಲಾಕ್ ಟವರ್, ಟೌನ್ ಹಾಲ್ ರಸ್ತೆಯ ಮೂಲಕ ಆಗಮಿಸಿ ಎ.ಬಿ. ಶೆಟ್ಟಿ ಸರ್ಕಲ್ ಬಳಿ ಸಮಾವೇಶಗೊಳ್ಳಲಿದೆ. ಅಲ್ಲಿಂದ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಪದ್ಮರಾಜ್ ನಾಮಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.



Join Whatsapp