ಮಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗುರುವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು.
ದ.ಕ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜು ಪೂಜಾರಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಮತ್ತು ಐವನ್ ಡಿಸೋಜ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಜಯಪ್ರಕಾಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.