Home ಟಾಪ್ ಸುದ್ದಿಗಳು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಬಿಎಸ್ ಪಿ ಅಭ್ಯರ್ಥಿಗೆ ಜೀವ ಬೆದರಿಕೆಯೊಡ್ಡಿದ ಕಾಂಗ್ರೆಸ್ ಅಭ್ಯರ್ಥಿ

ಚುನಾವಣೆಯಲ್ಲಿ ಸ್ಪರ್ಧಿಸದಂತೆ ಬಿಎಸ್ ಪಿ ಅಭ್ಯರ್ಥಿಗೆ ಜೀವ ಬೆದರಿಕೆಯೊಡ್ಡಿದ ಕಾಂಗ್ರೆಸ್ ಅಭ್ಯರ್ಥಿ

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್ ಪಿ ಅಭ್ಯರ್ಥಿಗೆ ಜೀವ ಬೆದರಿಕೆ ಹಾಗೂ ಈ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಬೆದರಿಕೆ ಹಾಕಿರುವ ಕಾಂಗ್ರೆಸ್ ಪಕ್ಷದ ಉಮಾಪತಿ ಶ್ರೀನಿವಾಸ್ ಗೌಡ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಬಹುಜನ ಸಮಾಜ ಪಕ್ಷ ಆಗ್ರಹಿಸಿದೆ.


ಈ ಕುರಿತು ಪ್ರತಿಕ್ರಿಯಿಸಿದ ಬಿಎಸ್ ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಇನ್ನಿತರ ಕಾಂಗ್ರೆಸ್ ಅಭ್ಯರ್ಥಿಗಳು ಉಮಾಪತಿ ಶ್ರೀನಿವಾಸ್ ಗೌಡ ಪರ ಬೆಂಬಲ ನೀಡಬೇಕು, ಇಲ್ಲವಾದರೆ ಚುನಾವಣೆಯಿಂದ ಹಿಂಜರಿಯ ಬೇಕು ಎಂದು ದೂರವಾಣಿ ಮೂಲಕ ಬೆದರಿಕೆ ಹಾಕುತ್ತಿದ್ದಾರೆ. ಆದ್ದರಿಂದ ಈ ಸಂಬಂಧ ಸ್ಥಳೀಯ ಪೊಲೀಸರು ಮೊಕದ್ದಮೆ ದಾಖಲಿಸುವ ಜೊತೆಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಬಿಎಸ್ಪಿ ಅಭ್ಯರ್ಥಿ ಉಮಾಪತಿಬಾಬು, ತನಗೆ ಹಾಗೂ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಈಗಾಗಲೇ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

Join Whatsapp
Exit mobile version