ಟಿಕೆಟ್ ಹಂಚಿಕೆ| ಡಿಕೆಶಿ ಇಂದು ದೆಹಲಿಗೆ

Prasthutha|

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸುಮಾರು 150 ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಸಂಕ್ರಾಂತಿ (ಜ.14) ಕಳೆಯುತ್ತಿದ್ದಂತೆ ಘೋಷಿಸಲು ತಯಾರಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ವರಿಷ್ಠರ ಜೊತೆ ಸಮಾಲೋಚಿಸಲು ಬುಧವಾರ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.

- Advertisement -

‘ಬುಧವಾರ ಬೆಳಿಗ್ಗೆ ತುರುವೇಕೆರೆಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಬಳಿಕ ದೆಹಲಿಗೆ ತೆರಳಲಿದ್ದಾರೆ. ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಲಿದ್ದಾರೆ’ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

Join Whatsapp