230 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಿರುವ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಬೊಮ್ಮಾಯಿ

Prasthutha|

ಶಿವಮೊಗ್ಗ: ಸಂಸತ್ನಲ್ಲಿ ಸ್ಪಷ್ಟ ಬಹುಮತ ಪಡೆಯಲು 272 ಸ್ಥಾನಗಳು ಬೇಕು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡಿರುವುದೇ 230 ಕ್ಷೇತ್ರಗಳಲ್ಲಿ. ಹೀಗಾಗಿ ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

- Advertisement -

ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಪರೀಕ್ಷೆಯಲ್ಲಿ ಪಾಸ್ ಆಗಲು ಕನಿಷ್ಠ 35 ಅಂಕಗಳು ಬೇಕು. ಆದರೆ, ಅವರು ಪರೀಕ್ಷೆ ಬರೆದಿರುವುದೇ 20 ಅಂಕಗಳಿಗೆ. ಕಾಂಗ್ರೆಸ್ ಪಾಸ್ ಆಗಲು ಹೇಗೆ ಸಾಧ್ಯ ? ಕಾಂಗ್ರೆಸ್ ಪಕ್ಷ ಫೇಲ್ ಆಗುವ ಪಕ್ಷ’ ಎಂದು ವಾಗ್ದಾಳಿ ನಡೆಸಿದರು.


ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ‘ತಂದೆಗೆ ತಕ್ಕ ಮಗ. ಜಗ ಮೆಚ್ಚಿದ ಮಗ’ ಎಂದು ಬಣ್ಣಿಸಿದರು.



Join Whatsapp