Home ಟಾಪ್ ಸುದ್ದಿಗಳು 230 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಿರುವ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಬೊಮ್ಮಾಯಿ

230 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಿರುವ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಬೊಮ್ಮಾಯಿ

ಶಿವಮೊಗ್ಗ: ಸಂಸತ್ನಲ್ಲಿ ಸ್ಪಷ್ಟ ಬಹುಮತ ಪಡೆಯಲು 272 ಸ್ಥಾನಗಳು ಬೇಕು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡಿರುವುದೇ 230 ಕ್ಷೇತ್ರಗಳಲ್ಲಿ. ಹೀಗಾಗಿ ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಪರೀಕ್ಷೆಯಲ್ಲಿ ಪಾಸ್ ಆಗಲು ಕನಿಷ್ಠ 35 ಅಂಕಗಳು ಬೇಕು. ಆದರೆ, ಅವರು ಪರೀಕ್ಷೆ ಬರೆದಿರುವುದೇ 20 ಅಂಕಗಳಿಗೆ. ಕಾಂಗ್ರೆಸ್ ಪಾಸ್ ಆಗಲು ಹೇಗೆ ಸಾಧ್ಯ ? ಕಾಂಗ್ರೆಸ್ ಪಕ್ಷ ಫೇಲ್ ಆಗುವ ಪಕ್ಷ’ ಎಂದು ವಾಗ್ದಾಳಿ ನಡೆಸಿದರು.


ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ‘ತಂದೆಗೆ ತಕ್ಕ ಮಗ. ಜಗ ಮೆಚ್ಚಿದ ಮಗ’ ಎಂದು ಬಣ್ಣಿಸಿದರು.

Join Whatsapp
Exit mobile version