Home ಟಾಪ್ ಸುದ್ದಿಗಳು ಮಂಗಳೂರು | ಜೆರೋಸಾ ಶಾಲೆಗೆ ಕಾಂಗ್ರೆಸ್ ನಿಯೋಗ ಭೇಟಿ: ಸತ್ಯಶೋಧನಾ ತನಿಖೆಗೆ ಆಗ್ರಹ

ಮಂಗಳೂರು | ಜೆರೋಸಾ ಶಾಲೆಗೆ ಕಾಂಗ್ರೆಸ್ ನಿಯೋಗ ಭೇಟಿ: ಸತ್ಯಶೋಧನಾ ತನಿಖೆಗೆ ಆಗ್ರಹ

ಮಂಗಳೂರು: ನಗರದ ಜೆಪ್ಪುವಿನ ಸಂತ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮಕ್ಕೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಮಾಜಿ ಸಚಿವರಾದ ಬಿ.ರಮಾನಾಥ ರೈ ಹಾಗೂ ವಿನಯ ಕುಮಾರ್ ಸೊರಕೆ ಅವರ ನೇತೃತ್ವದ ಜಿಲ್ಲಾ ಕಾಂಗ್ರೆಸ್ ನಿಯೋಗ ಇಂದು ಶಾಲೆಗೆ ಭೇಟಿ ನೀಡಿದೆ.


ಸಂಪೂರ್ಣ ಘಟನೆ ಹಾಗೂ ಬಳಿಕ ನಡೆದ ವಿದ್ಯಮಾನಗಳ ಕುರಿತಂತೆ ಶಿಕ್ಷಣ ಇಲಾಖೆಯ ನೇತೃತ್ವದಲ್ಲಿ ಸತ್ಯಶೋಧನಾ ತನಿಖೆಯಾಗಬೇಕು ಎಂದು ಒತ್ತಾಯಿಸಿದೆ.


ಬಳಿಕ ಮಾತನಾಡಿದ ರಮಾನಾಥ ರೈ, ಜೆರೋಸಾ ವಿದ್ಯಾಸಂಸ್ಥೆ ಘಟನೆ ಬಗ್ಗೆ ಆರೋಪ ದೊಡ್ಡ ಪ್ರಚಾರ ಆಗಿದೆ. ಅದರ ಸತ್ಯಾಸತ್ಯತೆ ವಿಮರ್ಶೆ ನಾವು ಮಾಡಬೇಕಿದೆ. ಸಮಾಜದಲ್ಲಿ ಸಾಮಾಜಿಕ ಸಾಮರಸ್ಯ ಉಳಿಯಬೇಕು ಅನ್ನೋದು ನಮ್ಮ ಆಶಯ ಎಂದರು.


ಕೆಲವರು ಪ್ರಚೋದನೆ ಮಾಡಬಹುದು, ಆದರೆ ನಾವು ಆ ಕೂಟದಲ್ಲಿ ಇಲ್ಲ. ಇವತ್ತು ಸಂಸ್ಥೆಯ ಮುಖ್ಯಸ್ಥರ ಭೇಟಿಯಾಗಿ ಮಾತುಕತೆ ಮಾಡಿದ್ದೇವೆ. ಸರ್ಕಾರ ಇದರ ಬಗ್ಗೆ ಒಂದು ಸತ್ಯಶೋಧನ ಸಮಿತಿ ಮಾಡಬೇಕು. ಇದು ಘರ್ಷಣೆಗೆ ಕಾರಣ ಆಗಬಾರದು, ಅಹಿತಕರ ಘಟನೆ ಆಗಬಾರದು ಎಂದರು.

Join Whatsapp
Exit mobile version