Home ಟಾಪ್ ಸುದ್ದಿಗಳು BBMP ಚುನಾವಣೆ ನಡೆಸುವಂತೆ ಕಾಂಗ್ರೆಸ್ ಆಗ್ರಹ

BBMP ಚುನಾವಣೆ ನಡೆಸುವಂತೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಸುಪ್ರೀಮ್ ಕೋರ್ಟ್ ದೇಶದ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ತೀರ್ಪು ನೀಡಿದ ಹಿನ್ನೆಲೆಯಲ್ಲಿ BBMP ಗೆ ಚುನಾವಣೆಯನ್ನು ಘೋಷಿಸುವಂತೆ ಕೆಪಿಸಿಸಿ ನಿಯೋಗದ ವತಿಯಿಂದ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ರಾಜ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾಮಲಿಂಗಾ ರೆಡ್ಡಿ, ಶಾಸಕ ರಿಝ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯರಾದ ಯು.ಬಿ. ವೆಂಕಟೇಶ್, ಪಿ.ಆರ್. ರಮೇಶ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಮತ್ತು ಮಾಜಿ ಮಹಾಪೌರರಾದ ಶ್ರೀಮತಿ ಗಂಗಾಬಿಕೆ ಮಲ್ಲಿಕಾರ್ಜುನ, ಮಾಜಿ ಆಡಳಿತ ಪಕ್ಷದ ನಾಯಕರಾದ ಎಮ್. ಶಿವರಾಜು, ಅಬ್ದುಲ್ ವಾಜಿದ್, ರಿಝ್ವಾನ್ ನವಾಬ್, ಸತ್ಯ ನಾರಾಯಣ್ ಮತ್ತು ಮಾಜಿ ಪಾಲಿಕೆ ಸದಸ್ಯ ಮೋಹನ್ ಕುಮಾರ್, ಬೆಂಗಳೂರು ನಗರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜ್ ಕುಮಾರ್, ಶೇಖರ್, ಜಿ.ಕೃಷ್ಣಪ್ಪ ಬಗ್ಗೆ ಶ್ರೀಘ್ರದಲ್ಲೇ ದಿನಾಂಕ ಪ್ರಕಟಿಸುವಂತೆ ಮನವಿ ಮಾಡಿದ್ದಾರೆ.

ಈ ವೇಳೆ ರಾಮಲಿಂಗಾ ರೆಡ್ಡಿ ಮಾತನಾಡಿ, ಬೆಂಗಳೂರು ನಗರ ವಾರ್ಡ್ ವಿಂಗಡನೆ ಮಾಡಲು ಕಾಂಗ್ರೆಸ್ ಪಕ್ಷ ಸಹಕಾರ ನೀಡಿದೆ. ಆದರೆ ಬಿಜೆಪಿ ತಮ್ಮಿಷ್ಟಕ್ಕೆ ತಕ್ಕಂತೆ ವಾರ್ಡ್ ವಿಂಗಡನೆ ಮಾಡಲು ಹೊರಡಿದೆ ಎಂದು ತಿಳಿಸಿದ್ದಾರೆ. ಬಿ.ಬಿ.ಎಂ.ಪಿ.ಚುನಾವಣೆ ಮೀಸಲಾತಿಯನ್ನ ಕಾಂತ್ ರಾಜ್ ಆಯೋಗ ತೀರ್ಮಾನದಂತೆ ಕೈಗೊಳ್ಳಲಿ ಎಂದು ತಿಳಿಸಿದ್ದಾರೆ.

ಹಿಂದುಳಿದ ವರ್ಗದವರಿಗೆ ಮೀಸಲಾತಿಯನ್ನು ಸಚಿವ ಸಂಪುಟದಲ್ಲಿ ತೀರ್ಮಾನಿಸಿ ರಾಜ್ಯ ಸರ್ಕಾರ ಚುನಾವಣೆ ನಡೆಸಲಿ .ಭಕ್ತವತ್ಸಲ ಸಮಿತಿ ವರದಿ ಕಾಯುವುದು ಬೇಡ ಇದರಿಂದ ಚುನಾವಣೆ ವಿಳಂಬವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಎಮ್.ಶಿವರಾಜುರವರು ಮಾತನಾಡಿ, ರಾಜ್ಯ ಸರ್ಕಾರ 20ತಿಂಗಳು ಕಳೆದರೆ ಡಿಲಿಮಿಟಿಶನ್ ಮೀನಮೇಷ ಏಣಿಸುತ್ತಿದೆ. ಸುಪ್ರೀಂಕೋರ್ಟ್ ಆದೇಶದಂತೆ ಚುನಾವಣೆ ಆಯೋಗ ಚುನಾವಣೆ ದಿನಾಂಕ ಘೋಷಣೆ ಮಾಡಲಿ ಮತ್ತು ರಾಜ್ಯ ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗದ ಮೀಸಲಾತಿ ನಿರ್ಣಯ ಮಾಡಿ ಚುನಾವಣೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.

ಅಬ್ದುಲ್ ವಾಜಿದ್ ರವರು ಮಾತನಾಡಿ, ಸುಪ್ರೀಂಕೋರ್ಟ್ ಸ್ಥಳೀಯ ಚುನಾವಣೆ ಬಗ್ಗೆ ಸ್ಪಷ್ಟವಾಗಿ ಆದೇಶ ನೀಡಿದೆ. ಕಳೆದ ಎರಡು ವರ್ಷದಿಂದ ಜನಪ್ರತಿನಿಧಿಗಳು ಅಭಿವೃದ್ದಿ ಕುಂಠಿತವಾಗಿದೆ. ಪ್ರಜಾಪ್ರಭುತ್ವ ರಕ್ಷಣೆಗೆ ತಕ್ಷಣ ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡುವ ಕುರಿತು ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Join Whatsapp
Exit mobile version