ಗಲ್ಲು ಶಿಕ್ಷೆಗೊಳಗಾದ ನೌಕಾಪಡೆ ಮಾಜಿ ಸಿಬ್ಬಂದಿ ಬಿಡುಗಡೆಗೆ ಕ್ರಮ ಕೈಗೊಳ್ಳಿ: ಕಾಂಗ್ರೆಸ್ ಒತ್ತಾಯ

Prasthutha|

ನವದೆಹಲಿ: ಕತಾರ್ ನಲ್ಲಿ ಗಲ್ಲು ಶಿಕ್ಷೆಗೊಳಗಾದ ಎಂಟು ಭಾರತೀಯ ನೌಕಾಪಡೆ ಮಾಜಿ ಸಿಬ್ಬಂದಿಯನ್ನು ಬಿಡುಗಡೆ ಮಾಡಲು ಕೇಂದ್ರವು ಕತಾರ್ ಸರ್ಕಾರದೊಂದಿಗಿನ ರಾಜತಾಂತ್ರಿಕ ಮತ್ತು ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸುತ್ತದೆ ಎಂದು ತಮ್ಮ ಪಕ್ಷ ನಿರೀಕ್ಷಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

- Advertisement -


ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಈ ಸಂಬಂಧ ಪೋಸ್ಟ್ ಮಾಡಿರುವ ನಾಯಕ ಜೈರಾಮ್ ರಮೇಶ್, ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಕತಾರ್ ನಲ್ಲಿ ನಡೆದ ಅತ್ಯಂತ ಗೊಂದಲದ ಬೆಳವಣಿಗೆಗಳನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅತ್ಯಂತ ದುಃಖ, ಸಂಕಟ ಮತ್ತು ಆಘಾತದಿಂದ ಕೂಡಿದೆ ಎಂಬುದನ್ನು ಗಮನಿಸಿದೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಆಶಿಸುತ್ತದೆ ಮತ್ತು ನಿರೀಕ್ಷಿಸುತ್ತದೆ. ಕತಾರ್ ಸರ್ಕಾರದೊಂದಿಗೆ ಭಾರತವು ತನ್ನ ರಾಜತಾಂತ್ರಿಕ ಮತ್ತು ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿ, ಅವರ ರಕ್ಷಣಗೆ ಧಾವಿಸುವುದನ್ನು ಖಚಿತ ಪಡಿಸಿಕೊಳ್ಳಲು ಕಾಂಗ್ರೆಸ್ ಬಯಸುತ್ತದೆ ಎಂದು ಹೇಳಿದ್ದಾರೆ.



Join Whatsapp