ನವದೆಹಲಿ: ಭಾರತೀಯ ಜನತಾ ಪಕ್ಷದ ಲೋಕಸಭಾ ಸದಸ್ಯೆ ಪ್ರಜ್ಞಾ ಸಿಂಗ್ ಠಾಕೂರ್ ಅವರ “ಮನೆಯಲ್ಲಿ ಆಯುಧವನ್ನು ಇಟ್ಟುಕೊಳ್ಳಿ” ಎಂಬ ವಿವಾದಾತ್ಮಕ ಹೇಳಿಕೆಗಾಗಿ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಮಧ್ಯಪ್ರದೇಶ ಕಾಂಗ್ರೆಸ್ ಒತ್ತಾಯಿಸಿದೆ.
ಭಾನುವಾರ ಶಿವಮೊಗ್ಗದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಜ್ಞಾ ಸಿಂಗ್, ತಮ್ಮ ಮೇಲೆ ಹಲ್ಲೆ ಮಾಡುವವರಿಗೆ ಮತ್ತು ತಮ್ಮ ಆತ್ಮಗೌರವದ ಮೇಲೆ ದಾಳಿ ಮಾಡುವವರಿಗೆ ತಕ್ಕ ಉತ್ತರ ನೀಡುವ ಹಕ್ಕು ಹಿಂದೂಗಳಿಗೆ ಇದೆ. ಆದ್ದರಿಂದ ಆತ್ಮರಕ್ಷಣೆಗಾಗಿ ಜನರು ತಮ್ಮ ಮನೆಯಲ್ಲಿ ಹರಿತವಾದ ಆಯುಧಗಳನ್ನು ಇಟ್ಟುಕೊಳ್ಳಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಮಧ್ಯಪ್ರದೇಶ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ಕೆ.ಕೆ.ಮಿಶ್ರಾ ಮಾತನಾಡಿ, ಠಾಕೂರ್ ಅವರು ಹಿಂಸಾಚಾರಕ್ಕೆ ಜನರನ್ನು ಪ್ರಚೋದಿಸಿದ್ದರಿಂದ ದೇಶದ್ರೋಹದ ಪ್ರಕರಣ ದಾಖಲಿಸುವ ಮೂಲಕ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.