ನಾಯಕತ್ವ ಕೊರತೆಯಿಂದ ಕಾಂಗ್ರೆಸ್ ಧೂಳೀಪಟ: ಯಡಿಯೂರಪ್ಪ

Prasthutha|

ಬೆಂಗಳೂರು: ನಮ್ಮ ನಿರೀಕ್ಷೆ ಮೀರಿ 5 ರಾಜ್ಯಗಳಲ್ಲಿ ಜನತೆ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ನಾಯಕತ್ವ ಕೊರತೆಯಿಂದ ಕಾಂಗ್ರೆಸ್ ಧೂಳೀಪಟವಾಗಿದೆ, ರಾಜ್ಯದಲ್ಲಿ ಬಿಜೆಪಿಗೆ ಈ ಫಲಿತಾಂಶ ಸಹಕಾರಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

- Advertisement -

ಪಂಚ ರಾಜ್ಯಗಳ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ನಾವು ಮಾಡಿದ ಒಳ್ಳೆಯ ಕೆಲಸಕ್ಕೆ, ಮೋದಿಯವರ ನಾಯಕತ್ವಕ್ಕೆ ಜನರು ಬೆಂಬಲ ಸೂಚಿಸಿದ್ದಾರೆ. ಈಗಾಗಲೇ ನಾವು ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದೇವೆ, ಮುಖ್ಯಮಂತ್ರಿ ಬೊಮ್ಮಾಯಿ ಒಳ್ಳೆಯ ಬಜೆಟ್ ಕೊಟ್ಟಿದ್ದಾರೆ. ಈ ಎಲ್ಲವನ್ನು ಇಟ್ಟುಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದರು.

ವಿಧಾನಮAಡಲದಲ್ಲಿ ಮಾತ್ರ ಕೂಗಾಡುವ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಇವತ್ತು ನೋಡಿ ಗೋವಾಕ್ಕೆ ಹೋಗಿ ಡಿ.ಕೆ. ಶಿವಕುಮಾರ್ ಉಳಿದಿರುವಂತಹ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ನಾವು ಹೊಡೆದುಕೊಂಡು ಹೋಗುವ ಪ್ರಶ್ನೆಯೇ ಇಲ್ಲ. ಮೋದಿಯ ಮೇಲೆ ನಂಬಿಕೆ ಇಟ್ಟು ಯಾರು ಬೇಕಾದರೂ ಬಿಜೆಪಿಗೆ ಬರಬಹುದು ಎಂದರು.

- Advertisement -

ನಮ್ಮ ಸ್ವಂತ ಶಕ್ತಿಯ ಮೇಲೆ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ಉತ್ತಮ ರೀತಿಯಲ್ಲಿ ಮತವನ್ನು ನೀಡಿದ್ದಾರೆ. ಇದು ಮುಂದಿನ ಚುನಾವಣೆಗೆ ಪರಿಣಾಮ ಬೀರಲಿದೆ. ಕಾಂಗ್ರೆಸ್ ನಾಯಕತ್ವವಿಲ್ಲದಂತ ದುಸ್ಥಿತಿಗೆ ತಲುಪಿದ್ದಾರೆ. ನಾವು ಈಗಾಗಲೇ ನಿಶ್ಚಯ ಮಾಡಿದ್ದೇವೆ. ರಾಜ್ಯದ ಉದ್ದಗಲಕ್ಕೂ ಸಂಚಾರ ಮಾಡಿ, ಅಧಿವೇಶನ ಮುಗಿದ ತಕ್ಷಣ ಪ್ರವಾಸ ನಡೆಸಿ, ಪಕ್ಷ ಸಂಘಟನೆಯ ಕೆಲಸ ಮಾಡಲಾಗುತ್ತದೆ ಎಂದು ಹೇಳಿದರು.



Join Whatsapp