Home ಟಾಪ್ ಸುದ್ದಿಗಳು ಗ್ಯಾರಂಟಿ ಬಗ್ಗೆ ಅಪಪ್ರಚಾರ: ಕುಮಾರಸ್ವಾಮಿ, ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ದೂರು

ಗ್ಯಾರಂಟಿ ಬಗ್ಗೆ ಅಪಪ್ರಚಾರ: ಕುಮಾರಸ್ವಾಮಿ, ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು: ಚುನಾವಣೆ ಬಳಿಕ ಕಾಂಗ್ರೆಸ್ನ ಗ್ಯಾರಂಟಿಗಳು ನಿಲ್ಲುತ್ತದೆ ಎಂಬ ಬಿಜೆಪಿ-ಜೆಡಿಎಸ್ ಪ್ರಚಾರದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.


ರಾಜ್ಯ ಸರ್ಕಾರದ ಗ್ಯಾರಂಟಿ ಬಗ್ಗೆ ವಿಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಈ ಹಿನ್ನಲೆ ಬಿಜೆಪಿ, ಜೆಡಿಎಸ್ ನಾಯಕರಾದ ಹೆಚ್ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ದೂರು ನೀಡಿದ್ದಾರೆ.

Join Whatsapp
Exit mobile version