ಅಮಿತ್ ಶಾ, ವಿ.ಸೋಮಣ್ಣ ವಿರುದ್ಧ ಪೊಲೀಸರಿಗೆ ಕಾಂಗ್ರೆಸ್ ದೂರು

Prasthutha|

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ವಿ. ಸೋಮಣ್ಣ ವಿರುದ್ಧ ಕಾಂಗ್ರೆಸ್ ನಾಯಕರು ಇಂದು ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -


ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ಬೆದರಿಕೆ, ಆಮಿಷವೊಡ್ಡಿರುವ ವಿಚಾರ ಹಾಗೂ ಚುನಾವಣೆ ಪ್ರಚಾರದ ವೇಳೆ ಅಮಿತ್ ಶಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಾಟೆಗಳು, ಘರ್ಷಣೆಗಳು, ಗಲಭೆಗಳು ಹೆಚ್ಚಾಗುತ್ತವೆ ಎಂಬ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅಮಿತ್ ಶಾ,ವಿ. ಸೊಮಣ್ಣ ವಿರುದ್ಧ ರಣದೀಪ್ ಸಿಂಗ್ ಸುರ್ಜೆವಾಲಾ, ಡಿ.ಕೆ. ಶಿವಕುಮಾರ್ ದೂರು ನೀಡಿದ್ದಾರೆ.


ಬಳಿಕ ಮಾಧ್ಯಮದವರ ಜತೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, ನಾವು ಗಂಭೀರ ವಿಚಾರವಾಗಿ ಕಾಂಗ್ರೆಸ್ ನಿಯೋಗದೊಂದಿಗೆ ಠಾಣೆಗೆ ಹೋಗಿ ಅಮಿತ್ ಶಾ ವಿರುದ್ಧ ದೂರು ನೀಡಿದ್ದೇವೆ. ಬಿಜೆಪಿ ನಾಯಕರು ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆ. ಪ್ರಚಾರದ ವೇಳೆ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆಗಳು ಆಗುತ್ತವೆ ಎಂದು ಪ್ರಚಾರದ ವೇಳೆ ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ಇವರ ವಿರುದ್ಧ ನಾವು ದೂರು ನೀಡಿದ್ದೇವೆ ಎಂದು ತಿಳಿಸಿದ್ದಾರೆ.

- Advertisement -


ನಮ್ಮ ದೂರಿಗೆ ಕೂಡಲೇ ಕ್ರಮ ಆಗಬೇಕು ಎಂದು ಚುನಾವಣಾ ಆಯೋಗ ಹಾಗೂ ಪೊಲೀಸರಿಗೆ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.

Join Whatsapp