ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಹುಬ್ಬಳ್ಳಿ: ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.

- Advertisement -

 ಅವರು ಇಂದು ಕಾಂಗ್ರೆಸ್ ಪಕ್ಷದವರು ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಪಾದಯಾತ್ರೆಗೆ ಬಹಳ ಮಹತ್ವ ನೀಡುವ ಅವಶ್ಯಕತೆ ಇಲ್ಲ. ಮೇಕೆದಾಟು ಯೋಜನೆಯ ವಸ್ತುಸ್ಥಿತಿಯ ಅರಿವಿದ್ದರೂ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ. ಕಾಂಗ್ರೆಸ್ ಆಡಳಿತವಿದ್ದ ಸಂದರ್ಭದಲ್ಲಿ ಯೋಜನೆಗೆ ಡಿಪಿಆರ್ ಕೂಡ ಸಿದ್ಧಪಡಿಸಲು ಸಾಧ್ಯವಾಗಲಿಲ್ಲ. ಈ ಯೋಜನೆಗೆ ಕಾಂಗ್ರೆಸ್ ನವರ ಕೊಡುಗೆ ಏನು ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದರು. ಮೇಕೆದಾಟು ಯೋಜನೆ ಹಾಗೂ ಕಳಸಾ ಬಂಡೂರಿ ಯೋಜನೆಗಳಿಂದ ರಾಜ್ಯದ ಜನತೆಗೆ ನೀರು ದೊರೆಯುವಂತಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಪೂರಕ ನಿರ್ಣಯಗಳನ್ನು ಕೈಗೊಳ್ಳಲಿದೆ .

ಈ ವಿಷಯದಲ್ಲಿ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾಜ್ಯದಲ್ಲಿ ಚಾಲನೆ ಸಿಗಲಿರುವ ಮಹತ್ವಾಕಾಂಕ್ಷಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಂದ ಮುಂದಿನ ದಿನಗಳಲ್ಲಿ ಕರ್ನಾಟಕದ ಸಾರಿಗೆ ಚಿತ್ರಣವೇ ಬದಲಾಗಲಿದೆ ಎಂದು ಮುಖ್ಯಾಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿಪರವಾದ ಯೋಜನೆಗಳಿಂದ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಭದ್ರ ಬುನಾದಿಯಾಗಲಿದೆ ಎಂದು ತಿಳಿಸಿದರು. ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿಯವರು ಹಲವಾರು ಯೋಜನೆಗಳಿಗೆ ಚಾಲನೆ ಹಾಗೂ ಲೋಕಾರ್ಪಣೆ ಮಾಡಲಿದ್ದಾರೆ.

- Advertisement -

 ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ರಾಜ್ಯದ ಬಗೆಗಿನ ಕಳಕಳಿಯಿಂದ ಹಲವಾರು ಅಭಿವೃದ್ಧಿ ಯೋಜನೆಗಳು ಕರ್ನಾಟಕದಲ್ಲಿ ಅನುಷ್ಠಾನವಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಹಾಗೂ ರಾಜ್ಯ ಹೆದ್ದಾರಿಗಳ ಉನ್ನತೀಕರಣದ ಯೋಜನೆಗಳು ಜಾರಿಯಾಗುತ್ತಿವೆ ಎಂದು ತಿಳಿಸಿದರು.



Join Whatsapp