ಕಾಂಗ್ರೆಸ್ ಸಂಸ್ಥಾಪನಾ ದಿನ: ಲೋಕಸಭೆ ಚುನಾವಣಾ ಪ್ರಚಾರಕ್ಕೆ ಚಾಲನೆ

Prasthutha|

ನವದೆಹಲಿ: ಕಾಂಗ್ರೆಸ್ ಪಕ್ಷದ 139ನೇ ಸಂಸ್ಥಾಪನಾ ದಿನದ ಪ್ರಯುಕ್ತ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು.

- Advertisement -

ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇಂದು ನಾಗ್ಪುರದಲ್ಲಿ ನಡೆಯುವ ‘ನಾವು ಸಿದ್ಧರಾಗಿದ್ದೇವೆ’ ಬೃಹತ್ ರ್ಯಾಲಿಯೊಂದಿಗೆ ಮುಂಬರುವ ಲೋಕಸಭೆ ಚುನಾವಣೆಗೆ ಪ್ರಚಾರ ಆರಂಭಿಸುವುದಾಗಿ ಪಕ್ಷ ಘೋಷಿಸಿದೆ.

Join Whatsapp