Home ಟಾಪ್ ಸುದ್ದಿಗಳು ಕಾಂಗ್ರೆಸ್ ಸಂಸ್ಥಾಪನಾ ದಿನ: ಲೋಕಸಭೆ ಚುನಾವಣಾ ಪ್ರಚಾರಕ್ಕೆ ಚಾಲನೆ

ಕಾಂಗ್ರೆಸ್ ಸಂಸ್ಥಾಪನಾ ದಿನ: ಲೋಕಸಭೆ ಚುನಾವಣಾ ಪ್ರಚಾರಕ್ಕೆ ಚಾಲನೆ

ನವದೆಹಲಿ: ಕಾಂಗ್ರೆಸ್ ಪಕ್ಷದ 139ನೇ ಸಂಸ್ಥಾಪನಾ ದಿನದ ಪ್ರಯುಕ್ತ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು.

ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇಂದು ನಾಗ್ಪುರದಲ್ಲಿ ನಡೆಯುವ ‘ನಾವು ಸಿದ್ಧರಾಗಿದ್ದೇವೆ’ ಬೃಹತ್ ರ್ಯಾಲಿಯೊಂದಿಗೆ ಮುಂಬರುವ ಲೋಕಸಭೆ ಚುನಾವಣೆಗೆ ಪ್ರಚಾರ ಆರಂಭಿಸುವುದಾಗಿ ಪಕ್ಷ ಘೋಷಿಸಿದೆ.

Join Whatsapp
Exit mobile version