ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ದೌರ್ಭಾಗ್ಯ ತಂದಿದೆ: ಸಂಸದ ಸುಧಾಕರ್

Prasthutha|

ಚಿಕ್ಕಬಳ್ಳಾಪುರ: ಭಾಗ್ಯಗಳನ್ನು ಕೊಡುತ್ತೇವೆಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ದೌರ್ಭಾಗ್ಯ ತಂದಿದೆ.ದೌರ್ಭಾಗ್ಯ ಒಂದೇ ತಂದಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್ ಟೀಕಿಸಿದರು.

- Advertisement -

ಬಿಜೆಪಿ ಜಿಲ್ಲಾ ವಿಶೇಷ ಕಾರ್ಯ ಕಾರಣಿ ಸಭೆಯಲ್ಲಿ ಮಾತನಾಡಿ, ವಾಲ್ಮೀಕಿ ನಿಗಮದಲ್ಲಿದ್ದ ಸರ್ಕಾರದ ಹಣವನ್ನು ಲೋಕಸಭಾ ಚುನಾವಣೆಯಲ್ಲಿ ಮದ್ಯ ಖರೀದಿ ಮಾಡಿದ್ದಾರೆ. ತೆಲಂಗಾಣ ಚುನಾವಣೆಗೂ ಸಹಾ ಇದೇ ಹಣ ಹಂಚಿಕೆ ಮಾಡಿದ್ದಾರೆ. ವಾಲ್ಮೀಕಿ ಜನಾಂಗಕ್ಕೆ ಸೌಲಭ್ಯ ಕಲ್ಪಿಸುವ ಬದಲು ಆ ಹಣದಲ್ಲಿ ಲ್ಯಾಂಬೋರ್ಗಿನಿ ಕಾರು ಖರೀದಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದು ಕಾಂಗ್ರೆಸ್ ನ ದುರಾಡಳಿತಕ್ಕೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರದಲ್ಲಿರಲು ನೈತಿಕತೆ ಇಲ್ಲ. ಸರ್ಕಾರ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಬಂದಿದೆ. ಸಚಿವ ಕೆ.ಎನ್.ರಾಜಣ್ಣ ರವರ ಸಹಕಾರಿ ಖಾತೆ ಅಡಿಯಲ್ಲಿ ಬರುವ ಅಪೆಕ್ಸ್ ಬ್ಯಾಂಕ್ ನಲ್ಲೂ ಸಾವಿರಾರು ಕೋಟಿ ಹಗರಣ ಆಗಿದೆ ಅಂತಿದ್ದಾರೆ. ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಈ ಹಗರಣಗಳನ್ನು ನೋಡಿದರೆ ಬೇಲಿಯ ಎದ್ದು ಹೊಲ ಮೇಯ್ದಂತೆ ಈ ಸರ್ಕಾರದ ಕೆಲಸವಾದಂತಿದೆ. ನೈತಿಕತೆ ಇನ್ನೂ ಉಳಿದಿದ್ರೆ ರಾಜೀನಾಮೆ ಕೊಡೋದು ಒಳ್ಳೆಯದು ಎಂದರು.



Join Whatsapp