ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಸುಳ್ಳು ಹೇಳಿಸಿದೆ: ಆರ್ ಅಶೋಕ್

Prasthutha|

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಸರ್ಕಾರ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಸುಳ್ಳು ಹೇಳಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

- Advertisement -


ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಸುಳ್ಳು ಮಾಹಿತಿ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಈವರೆಗೂ ಯಾವುದೇ ಅಭಿವೃದ್ಧಿ ಆಗಿಲ್ಲ. ಜನರ ಹಣವನ್ನು ಕೊಳ್ಳೆ ಹೊಡೆಯುವುದೇ ಸರ್ಕಾರದ ಕೆಲಸ ಆಗಿದೆ ಎಂದು ಟೀಕಿಸಿದರು.


ಬಿಜೆಪಿ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು, ಕೇಂದ್ರದ ಯೋಜನೆಯನ್ನು ನಾವೇ ತಂದಿದ್ದೀವಿ, ನಾವೇ ಮಾಡಿದ್ದು ಎಂದು ರಾಜ್ಯ ಸರ್ಕಾರ ಬೆನ್ನು ತಟ್ಟಿಕೊಂಡಿದೆ. ಕೋಮುವಾದಕ್ಕೆ ಉತ್ತೇಜನ ನೀಡುವ ಕೆಲಸ ಆಗಿದೆ. ಐದನೇ ಗ್ಯಾರಂಟಿ ಪ್ರಾರಂಭವೇ ಆಗಿಲ್ಲ. ಒಬ್ಬ ನಿರುದ್ಯೋಗಿ ಯುವಕನಿಗೆ ಒಂದು ರೂಪಾಯಿ ಸಿಕ್ಕಿಲ್ಲ. ಬರದ ವಿಚಾರದಲ್ಲಿ ಎರಡು ಸಾವಿರ ಹಣ ಕೊಟ್ಟಿಲ್ಲ. ಕಂತು ಕಂತು ಆಗಿ ಹೋಗಿದೆ. ರೈತರಿಗೆ ಮೋಸ ಮಾಡುತ್ತಾ ಇದ್ದಾರೆ. ಬರ ಪರಿಸ್ಥಿತಿ 25 ಸಾವಿರ ಪರಿಹಾರ ನೀಡಬೇಕು ಅಂತ ಒತ್ತಾಯ ಮಾಡಿದ್ದೆವು. ಅದನ್ನು ಕೊಡುವುದು ಬಿಟ್ಟು ಕೇಂದ್ರದ ಮೇಲೆ ಗೂಬೆ ಕುರಿಸುವ ಕೆಲಸ ಆಗುತ್ತಿದೆ. ಅಭಿವೃದ್ಧಿ ಕುಂಠಿತ ಆಗಿದೆ ಎಂದು ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

Join Whatsapp