ಕರ್ನಾಟಕವನ್ನು ಬರ್ಬಾದ್ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಮಾಡೆಲ್: ಬಿಜೆಪಿ

Prasthutha|

ಬೆಂಗಳೂರು: ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರವನ್ನು ಉಲ್ಲೇಖಿಸಿ ರಾಜ್ಯ ಬಿಜೆಪಿ ಘಟಕ ಸರ್ಕಾರದ ವಿರುದ್ದ ಕಿಡಿಕಾರಿದೆ.

- Advertisement -


ಈ ಬಗ್ಗೆ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ‘ಕರ್ನಾಟಕವನ್ನು ಎಲ್ಲಾ ವಲಯಗಳಲ್ಲಿಯೂ ಸಂಪೂರ್ಣ ಬರ್ಬಾದ್ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್. ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ ಸಂಪೂರ್ಣ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ’ ಎಂದು ವಾಗ್ದಾಳಿ ನಡೆಸಿದೆ.


‘ರಾಜ್ಯದ ಇಂಧನ ಇಲಾಖೆ ತನ್ನ ದೈನಂದಿನ ಚಟುವಟಿಕೆಗಳಿಗೂ ಹಣವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿ, ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡಿ, ಇಲ್ಲವೇ ಸರ್ಕಾರದಿಂದ ಬರಬೇಕಿರುವ ಬಾಕಿಯನ್ನು ಪಾವತಿಸಿ ಎಂದು ಪತ್ರ ಬರೆದಿರುವುದು ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಷ್ಟರ ಮಟ್ಟಿಗೆ ಹದಗೆಡಿಸಿದೆ ಎಂಬುದರ ಸುಸ್ಪಷ್ಟ ನಿದರ್ಶನ’ ಎಂದಿದೆ.

- Advertisement -


‘ಸಿಎಂ ಸಿದ್ದರಾಮಯ್ಯ ಅವರೇ, ಕರ್ನಾಟಕ ಬರ್ಬಾದ್ ಆಗಿದೆ ಎಂಬುದು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದ ಕೊನೆಗೂ ಋಜುವಾತಾಗಿದೆ. ಸಿದ್ದರಾಮಯ್ಯನವರು, ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಯ ಅಗತ್ಯವಿದೆಯೇ’ ಎಂದು ಪ್ರಶ್ನಿಸಿದೆ.



Join Whatsapp