ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗ್ಯಾರಂಟಿ: ಮಹಿಳೆಯರಿಗೆ ಮಾಸಿಕ 1500 ರೂ. ನೆರವು

Prasthutha|

ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಮುಂದಿನ ತಿಂಗಳು ನಡೆಯಲಿದ್ದು, ಕಾಂಗ್ರೆಸ್ ಇಂದು (ಮಂಗಳವಾರ) ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

- Advertisement -


ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಇಂದು ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಸೇರಿದಂತೆ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು.


ಹಳೆಯ ಪಿಂಚಣಿ ಯೋಜನೆ, ಜಾತಿ ಗಣತಿ, ಸರ್ಕಾರಿ ಸೇವೆಗಳಲ್ಲಿ ಒಬಿಸಿಗಳಿಗೆ ಶೇ.27 ಮೀಸಲಾತಿ, ಮಹಿಳೆಯರಿಗೆ ಮಾಸಿಕ 1,500 ರೂ. ಆರ್ಥಿಕ ನೆರವು ನೀಡುವ ‘ನಾರಿ ಸಮ್ಮಾನ್ ನಿಧಿ’ ಹಾಗೂ 25 ಲಕ್ಷ ರೂ.ಗಳ ಆರೋಗ್ಯ ವಿಮೆ ಸೇರಿದಂತೆ 101 ಪ್ರಮುಖ ಭರವಸೆಗಳನ್ನು ಪ್ರಕಟಿಸಿದೆ. ಇಂದಿರಾ ಗೃಹ ಜ್ಯೋತಿ ಯೋಜನೆಯಡಿ 100 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ನಂತರದ 200 ಯೂನಿಟ್ ವಿದ್ಯುತ್ ಅರ್ಧ ಶುಲ್ಕದಲ್ಲಿ ನೀಡಲಾಗುವುದು. ಆರೋಗ್ಯದ ಹಕ್ಕು ಕಾನೂನು ಜಾರಿ ಮಾಡುತ್ತೇವೆ. ಹಳೆ ಪಿಂಚಣಿ ಯೋಜನೆ ಅನುಷ್ಠಾನಕ್ಕೆ ತರುತ್ತೇವೆ. ಸರ್ಕಾರಿ ಸೇವೆಗಳು ಮತ್ತು ಯೋಜನೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಶೇ.27ರಷ್ಟು ಮೀಸಲಾತಿ ಕಲ್ಪಿಸಲಾಗುತ್ತದೆ. ಸಾಗರ ಜಿಲ್ಲೆಯಲ್ಲಿ ಸಂತ ಶಿರೋಮಣಿ ರವಿದಾಸ್ ಹೆಸರಿನಲ್ಲಿ ಕೌಶಲ್ಯ ಉನ್ನತೀಕರಣ ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತದೆ ಎಂದು ಪ್ರಣಾಳಿಕೆಯಲ್ಲಿ ವಿವರಿಸಲಾಗಿದೆ.

Join Whatsapp